ದಾವಣಗೆರೆ, ಆ.25: ನಗರದ ಜೆ.ಜೆ.ಎಂ.ವೈದ್ಯಕೀಯ ಕಾಲೇಜಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಬೆಳಗಾಂ ವಲಯದಿಂದ ಆಯೋಜಿಸಿದ 2023-24ನೇ ಸಾಲಿನ ಚೆಸ್ (chess) ಪಂದ್ಯಾವಳಿಯ ಫಲಿತಾಂಶ ಪ್ರಕಟಗೊಂಡಿದೆ.
ಪುರುಷರ ವಿಭಾಗದಲ್ಲಿ ಹುಬ್ಬಳ್ಳಿಯ ಕರ್ನಾಟಕ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮೊದಲ ಬಹುಮಾನ, ಬಳ್ಳಾರಿಯ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ದ್ವಿತೀಯ ಬಹುಮಾನ ಪಡೆದುಕೊಂಡಿತು. ಮಹಿಳೆಯರ ವಿಭಾಗದಲ್ಲಿ ನಗರದ ಜೆಜೆಎಂ ಮೆಡಿಕಲ್ ಕಾಲೇಜ್ ಪ್ರಥಮ ಬಹುಮಾನ ಪಡೆದುಕೊಂಡರೆ ಕಾರವಾರ ಇನ್ಸ್ಟಿಟ್ಯೂಟ್ ಮೆಡಿಕಲ್ ಸೈನ್ಸಸ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಈ ಸಂದರ್ಭದಲ್ಲಿ ವಿಜೇತರಿಗೆ ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಬಹುಮಾನ ವಿತರಿಸಿ ಶುಭ ಹಾರೈಸಿದರು.
ನೀರಾವರಿ ಬೆಳೆಗಳನ್ನು ಬೆಳೆದು ನಿಯಮ ಉಲ್ಲಂಘಸಿದ್ರೆ ಸೂಕ್ತ ಕಾನೂನು ಕ್ರಮ; ಅರೆ ನೀರಾವರಿಗೆ ಮಾತ್ರ ನೀರು
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಡಾ.ನರೇಂದ್ರನಾಥ್, ಡಾ.ಸಂತೋಷಕುಮಾರ, ಡಾ.ಅಶ್ವಿನಿ, ಡಾ.ನೀತು, ಆರ್ಬಿಟರ್ ನವೀನ್, ರಾಜೀವ್ ಗಾಂಧಿ ಯುನಿವರ್ಸಿಟಿಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಡಾ.ಜೋಸ್ ಅನಿಲ್, ರಾಜೀವ್ ಗಾಂಧಿ ಯೂನಿವರ್ಸಿಟಿ ಬೆಳಗಾಂ ವಲಯದ ಕೋ ಆರ್ಡಿನೇಟರ್ ಸಿ.ಪಿ.ಮಹೇಶ್, ಜಿ ಎಂ -ಫಾರ್ಮಸಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹನುಮಂತಪ್ಪ, ಜೆಜೆಎಂ ಮೆಡಿಕಲ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೆ.ಎನ್.ಗೋಪಾಲಕೃಷ್ಣ, ಶಾಂತಕುಮಾರ್ ಇತರರು ಇದ್ದರು.
