ಮಾರ್ಚ್ 17 ರಂದು ಹೊನ್ನಾಳಿಗೆ ಮುಖ್ಯಮಂತ್ರಿ ಬೊಮ್ಮಾಯಿ

ಮಾರ್ಚ್ 17 ರಂದು ಹೊನ್ನಾಳಿಗೆ ಮುಖ್ಯಮಂತ್ರಿ ಬೊಮ್ಮಾಯಿ

ದಾವಣಗೆರೆ: ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 17ರ ಶುಕ್ರವಾರ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪಾನೆ ನೆರೆವೇರಿಸಲಿದ್ದಾರೆ.

ಅಂದು ಮಧ್ಯಾಹ್ನ 2.15ಕ್ಕೆ ಶಿಕಾರಿಪುರದಿಂದ ಹೊರಟು ಮಧ್ಯಾಹ್ನ 2.30ಕ್ಕೆ ಹೆಚ್.ಕಡದಕಟ್ಟೆ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಹೊನ್ನಾಳಿಯ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 4-30ಕ್ಕೆ ಹೆಚ್.ಕಡದಕಟ್ಟೆ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!