ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಕಾರ್ಯಾಗಾರ
ಚಿತ್ರದುರ್ಗ: ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಭಾಗೀದಾರ ಇಲಾಖೆಗಳ ಬಾಲ್ಯವಿವಾಹ ನಿಷೇಧಾಧಿಕಾರಿಗಳಿಗೆ ಅವರ ಕರ್ತವ್ಯ ನಿರ್ವಹಿಸಲು ಕ್ರಮಬದ್ಧ ಕಾರ್ಯವಿಧಾನ (ಎಸ್‌ಒಪಿ) ಕುರಿತು ತರಬೇತಿ ಕಾರ್ಯಾಗಾರವನ್ನು ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ದಿ.19ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ. ಕಾರ್ಯಾಗಾರ ಉದ್ಘಾಟಿಸಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರಾದ ಗಿರೀಶ್ ಬಿ.ಕೆ. ಉಪಸ್ಥಿತರಿರಲಿದ್ದಾರೆ. ಜಿ.ಪಂ. ಸಿಇಒ ಎಂ.ಎಸ್. ದಿವಾಕರ್ ಅಧ್ಯಕ್ಷತೆ ವಹಿಸಿದ್ದರು.
ಪೊಲೀಸ್ ಅಧೀಕ್ಷಕ ಕೆ.ಪರಶುರಾಮ, ಡಿಹೆಚ್‌ಒ ಡಾ.ಆರ್.ರಂಗನಾಥ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪಿ.ಮಮತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಡಿ.ಟಿ. ಜಗನ್ನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಯಶೋಧರ ಸಿ.ಎನ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ, ಸದಸ್ಯ ಮಂಜುನಾಥ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ, ಪೊಲಿಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಂಯುಕ್ತಾಶ್ರಯದಲ್ಲಿ ತರಬೇತಿ ಆಯೋಜಿಸಲಾಗಿತ್ತು