ಉತ್ತಮ ಜನಪ್ರತಿನಿಧಿ ಆಯ್ಕೆ ನಮ್ಮೆಲ್ಲರ ಜವಬ್ದಾರಿ: ವಾಸಂತಿ ಉಪ್ಪಾರ್
ದಾವಣಗೆರೆ : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯು ಮೇ.10 ರಂದು ನಡೆೆಯಲಿದ್ದು ಎಲ್ಲರೂ ಮತದಾನ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಏ.19 ರಂದು ನಗರದ ಹೊಂಡದ ಸರ್ಕಲ್‌ನಲ್ಲಿ ಗಾಂಧಿ ನಗರದ ಅಂಗನವಾಡಿ ಕಾರ್ಯಕರ್ತೆಯರಿಂದ ಚುನಾವಣೆ ಸಂತೆ ಅಲ್ಲ, ನಮ್ಮ ಮತ ಮಾರಾಟಕ್ಕಿಲ್ಲ ಎಂಬ ಬೀದಿ ನಾಟಕ ಪ್ರದರ್ಶಿಸುವುದರ ಮುಲಕ ಮತದಾನದ ಅರಿವು ಮೂಡಿಸಲಾಗಿತು.
ಮತದಾರರು ಮತವನ್ನು ಹಣ ಮತ್ತು ಆಮಿಷಗಳಿಗೆ ಮಾರಿಕೊಳ್ಳದೇ ಹಾಗೂ ಅಂತಹ ಅಕ್ರಮಗಳು ಕಂಡುಬಂದಲ್ಲಿ ಸಿ.ವಿಸಿ಼ಲ್ ಅ್ಯಪ್ ಮೂಲಕ ದೂರುಗಳನ್ನು ಸಲ್ಲಿಸಬಹುದು ಎಂಬ ಸಂದೇಶಗಳನ್ನು ಸಾರುವಂತಹ ನಾಟಕ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.