ದುಡಾ ಪ್ರದೇಶದಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ತೆರವುಗೊಳಿಸಿ – ದೇವರಮನಿ ಶಿವಕುಮಾರ್‌ ಸೂಚನೆ

 

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸುವಂತೆ ಧೂಡಾ ಅಧ್ಯಕ್ಷರಾದ ದೇವರಮನಿ ಶಿವಕುಮಾರ್‌ ಸೂಚಿಸಿದ್ದಾರೆ.

ಇಂದು ದೂಡಾದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಭೆಯಲ್ಲಿ ಹಾಜರಿದ್ದ ಮಹಾನಗರಪಾಲಿಕೆ, ಕಂದಾಯ ಇಲಾಖೆ, ಬೆಸ್ಕಾಂ ಇಲಾಖೆ, ನೋಂದಣಿ ಇಲಾಖೆ, ಆರಕ್ಷಕ ಇಲಾಖೆ ಅಧಿಕಾರಿಗಳಿಗೆ ಅನಧಿಕೃತ ಬಡಾವಣೆ ನಿರ್ಮಾಣವಾಗಿರುವುದನ್ನು ತಡೆಹಿಡಿಯಲು ಕಟ್ಟೆಚ್ಚರದಿಂದ ಕ್ರಮ ವಹಿಸಲು ಆದೇಶಿಸಿದರು.

ದಾ-ಹ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶದಲ್ಲಿ ಅನಧಿಕೃತ ಬಡಾವಣೆ ನಿರ್ಮಾಣವಾಗದಂತೆ ತಡೆಹಿಡಿಯಲು ಕಟ್ಟುನಿಟ್ಟನ ಕ್ರಮವನ್ನು ಜರುಗಿಸಲಾಗುವುದು ಎಂದು ಸೂಚಿಸಿದರು.

ಸದರಿ ಸಭೆಯಲ್ಲಿ ಪ್ರಾಧಿಕಾರದ ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಹೆಚ್.ಶ್ರೀಕರ್ ಮತ್ತು ಪ್ರಾಧಿಕಾರದ ಸದಸ್ಯರುಗಳಾದ ಮಾರುತಿರಾವ್ ಘಾಟ್ಗೆ, ಲಕ್ಷ್ಮಣ, ಬಾತಿ ಚಂದ್ರಶೇಖರ್, ಗೌರಮ್ಮ ವಿ.ಪಾಟೀಲ್ ಹಾಗೂ ತಹಶೀಲ್ದಾರರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!