ಕರ್ನಾಟಕದಲ್ಲಿ ಪುನಃ ಲಾಕ್ ಡೌನ್, ಮೇ.24ರಿಂದ ಬೆಳಗ್ಗೆ 6 ರಿಂದ ಜೂನ್.7ರವರೆಗೆ ಲಾಕ್ ಡೌನ್ ವಿಸ್ತರಣೆ – ಸಿಎಂ ಯಡಿಯೂರಪ್ಪ ಘೋಷಣೆ

BREAKING NEWS

ರಾಜ್ಯದಲ್ಲಿ ಮತ್ತೆ ಮೇ.24ರಿಂದ ಜೂನ್.7ರವರೆಗೆ 14 ದಿನಗಳವರೆಗೆ ಲಾಕ್ ಡೌನ್ ವಿಸ್ತರಣೆ – ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಬೆಳಿಗ್ಗೆ 9.45 ಆದ್ರೂ ನಂತವೂ ಜನರು ತಿರುಗಾಡುತ್ತಿದ್ದಾರೆ. ಇದಕ್ಕೆ ಇನ್ಮುಂದೆ ಅವಕಾಶ ಇಲ್ಲ. ಪೊಲೀಸರಿಗೆ ಸೂಚಿಸಲಾಗಿದೆ. ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!