ನವೀನ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಿ.ಎಂ ಬಸವರಾಜ್ ಬೊಮ್ಮಾಯಿ
ದಾವಣಗೆರೆ : ಇಂದು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದಲ್ಲಿ ಉಕ್ರೇನ್ ಯುದ್ಧದಲ್ಲಿ ಸಾವಿಗೀಡಾದ ನವೀನ ಗ್ಯಾನಗೌಡರ್ ಅವರ ಪಾರ್ಥೀವ ಶರೀರಕ್ಕೆ ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಹಾಗೂ ಸಂಸದರಾದ ಡಾ. ಜಿ.ಎಂ. ಸಿದ್ದೇಶ್ವರ ಅವರು ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.
ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ತರಳಬಾಳು ಜಗದ್ಗುರು 1108 ಡಾ|| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಹರಿಹರದ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು, ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಮತ್ತು ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಉಪಸ್ಥಿತರಿದ್ದರು.