ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

CM Bommai attended the BJP National Executive meeting in Delhi

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ.

“ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿದೆನು.” ಎಂದು ಸಿಎಂ ಬೊಮ್ಮಾಯಿ ಅವರು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!