ಫೆ.9ರಂದು ವಾಲ್ಮೀಕಿ ಜಾತ್ರೆಗೆ ಸಿಎಂ ಬೊಮ್ಮಾಯಿ

ವಾಲ್ಮೀಕಿ ಜಾತ್ರೆಗೆ ಸಿಎಂ ಬೊಮ್ಮಾಯಿ
ದಾವಣಗೆರೆ :ಇದೇ ಫೆ.9ರಂದು ಹರಿಹರ ತಾಲ್ಲೂಕು ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಹಾಗೂ ಜನ ಜಾಗೃತಿ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಅಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು, 1.50ಕ್ಕೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಹೆಲಿಪ್ಯಾಡ್ ಗೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ. ಕಾರ್ಯಕ್ರಮದ ನಂತರ 3.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ