ಗಣಿಗಳ ಆಧುನೀಕರಣಕ್ಕೆ ಉನ್ನತ ಮಟ್ಟದ ಸಮಿತಿ ರಚಿಸಲು ಸಿಎಂ ಬೊಮ್ಮಾಯಿ‌ ಸೂಚನೆ

cm meeting with msme and mining officers

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ಯವರು ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದರು.

ಗಣಿಗಳ ಆಧುನೀಕರಣಕ್ಕೆ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರದ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸುವಂತೆ ಸಭೆಯಲ್ಲಿ ಸಿಎಂ ಬೊಮ್ಮಾಯಿ‌ ಸೂಚಿಸಿದರು. ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ‌ ವಿವಿಧ ದೇಶಗಳಲ್ಲಿ ಗಣಿಗಾರಿಕೆಯ ಪರಿಕಲ್ಪನೆ, ಯಂತ್ರೋಪಕರಣ ಹಾಗೂ ಖನಿಜ ಅನ್ವಷೇಣೆಯಲ್ಲಿ ಆಧುನೀಕರಣವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಗಂಭೀರವಾಗಿ ಚಿಂತನೆ ನಡೆಸಿ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ತಿಳಿಸಿದರು.

ಮರಳು ನೀತಿ ತಿದ್ದುಪಡಿಗೆ ಸಿಎಂ ಸೂಚನೆ

ಬಡವರು ಮತ್ತು ಮಧ್ಯಮವರ್ಗದವರಿಗೆ ಸಹಾಯವಾಗುವಂತೆ ಮರಳು ನೀತಿಯನ್ನು ತಿದ್ದುಪಡಿ ಮಾಡುವಂತೆ ಸಿಎಂ ಬೊಮ್ಮಾಯಿ‌ ಸಭೆಯಲ್ಲಿ ತಿಳಿಸಿದರು. ಕೆಲವರ ಕೈಯಲ್ಲಿರುವ ಮರಳು ಗಣಿಗಾರಿಕೆಯನ್ನು ಮುಕ್ತಗೊಳಿಸುವ ಅಗತ್ಯವಿದೆ ಎಂದರು.

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಎಂ ಎಸ್ ಎಂ ಈ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತು ಗಣಿ ಇಲಾಖೆ ನಿರ್ದೇಶಕ ರಮೇಶ್ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!