ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನ

IMG-20220822-WA0019

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ. ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನ.

ಇಂದು ಬೆಳಗ್ಗೆ ಜಿಮ್‌ಗೆ ಹೊಗಿ ವರ್ಕೌಟ್ ಮಾಡುವಾಗ ಕಾಣಿಸಿಕೊಂಡ ತೀರ್ವ ಎದೆನೋವು., ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮದ್ಯೆ ನಿಧನ. ಬೊಮ್ಮಾಯಿ‌ ಗೃಹ ಸಚಿವರಾದಾಗಿನಿಂದ ಮಾಧ್ಯಮ ಸಂಯೋಜಕರಾಗಿದ್ದರು ಗುರುಲಿಂಗ ಸ್ವಾಮಿ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (40) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಜಿಮ್‌ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ.

ರಾಜ್ಯದ ವಿವಿಧ ಪತ್ರಿಕೆ, ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಕರ್ತವ್ಯ ನಿಭಾಯಿಸಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು, ಬಸವರಾಜ ಬೊಮ್ಮಾಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಪತ್ರಿಕಾರಂಗ ಅವರ ನಿಧನಕ್ಕೆ ಸಂತಾಪ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!