ಸಿ.ಎಂ.ಇಬ್ರಾಹಿಂ ರಾಜೀನಾಮೆ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು ಸಿ.ಎಂ. ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಸಿ.ಎಂ ಇಬ್ರಾಹಿಂ ಹೇಳಿದ್ದರು. ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದು ಹೇಳಿದ್ದರು.