ಸಿಎಂ ಮನೆಯಲ್ಲಿ ಶಾಮನೂರು ಶಿವಶಂಕರಪ್ಪ ನವರನ್ನು ಭೇಟಿಯಾದ ರೇಣುಕಾಚಾರ್ಯ
ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾದಿಂದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಲಾಯಿತು.
ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಬೊಮ್ಮಾಯಿ ಅವರಿಗೆ ಸನ್ಮಾನಿಸಿ, ಹೂಗುಚ್ಛ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಪಾಲ್ಗೊಂಡು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಮಹಾಸಭಾದ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ,
ಅವರ ಕುಶಲೋಪರಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ, ಸಚ್ಚಿದಾನಂದ, ರೇಣುಕ ಪ್ರಸನ್ನ, ಮಹಾಸಭಾದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಮಧುರಾ ಅಶೋಕ್, ರಾಜಲಕ್ಷ್ಮೀ, ದಿನೇಶ್ ಕೆ.ಶೆಟ್ಟಿ ಮತ್ತಿತರರಿದ್ದರು.