ಕೊರೊನಾ ತಡೆಗೆ ಡಿಸಿಗಳ ಜೊತೆ ಸಿಎಂ ಮಹತ್ವದ ಸಭೆ – ಎಲ್ಲಾ ಸಚಿವರ ಒಂದು ವರ್ಷದ ವೇತನ ಕೋವಿಡ್ ನಿಧಿಗೆ- ಸಚಿವ ಆರ್.ಅಶೋಕ್, ಬಾಂಗ್ಲಾ ದೇಶದಿಂದ ಅಕ್ರಮವಾಗಿ ರೆಮ್ ಡಿಸಿವರ್ ಸಪ್ಲೈ, ಸಿಸಿಬಿ ಯಿಂದ ತನಿಖೆ-ಗೃಹಮಂತ್ರಿ.
ಬೆಂಗಳೂರು: ಕೊರೊನಾ ಮಹಾಮಾರಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಎಲ್ಲಾ ಡಿಸಿಗಳು,ಎಸ್ಪಿಗಳು,ಸಿಇಓಗಳ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಡಿಯೋ ಸಂವಾದದ ಮೂಲಕ ಮಹತ್ವದ ಸಭೆ ನಡೆಸಿದ್ರು. ಮೇ 12ರ ವರೆಗೆ ಸರ್ಕಾರ ವಿಧಿಸಿರೋ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಜವಬ್ದಾರಿ ನಿಮ್ಮ ಮೇಲೆ ಇದೆ. ಯಾವುದೇ ಮುಲಾಜಿಲ್ಲದೆ ಅದನ್ನು ಕಾರ್ಯರೂಪಕ್ಕೆ ತರುವ ಹೊಣೆ ನಿಮ್ಮ ಮೇಲಿದೆ. ಜನರಿಗೆ ತೊಂದರೆ ಆಗದ ರೀತಿ ಅವರ ನಿತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿದೆ.
ಈ ಸಮಯ ಮುಗಿದ ನಂತರ ಯಾರೂ ಕೂಡ ಜನರು ಓಡಾಡಬಾರದು. ಜನರು ಓಡಾಡದಂತೆ ಪೊಲೀಸರು ನಿಗಾ ವಹಿಸಬೇಕು. ಅಗತ್ಯ ವಸ್ತುಗಳ ಖರೀದಿಗೆ ಬಂದಾಗ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಜನರು ಮಾಸ್ಕ್ ಧರಿಸಿ, ಸೋಷಿಯಲ್ ಡಿಸ್ಟೇನ್ಸ್ ನಲ್ಲಿ ಇರಬೇಕು.. ಕೊವೀಡ್ ಮಾರ್ಗಸೂಚಿ ಯಂತೆ ಜನರು ಅಗತ್ಯ ವಸ್ತುಗಳ ಖರೀದಿ ಮಾಡಬೇಕು.ಅಗತ್ಯ ವಸ್ತುಗಳ ಖರೀದಿ ಸಮಯ ಮುಗಿದ ನಂತರ ಯಾವೊಬ್ಬ ಜನರು ಹೊರಗೆ ಓಡಾಡಬಾರದು. ಈ ನಿಟ್ಟಿನಲ್ಲಿ ಜಿಲ್ಲೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ರು.. ಈ 14 ದಿನಗಳಲ್ಲಿ ಹೆಚ್ಚುತ್ತಿರುವ ಕೊರೋನಾ ವನ್ನು ನಾವೆಲ್ಲರೂ ನಿಯಂತ್ರಣ ಮಾಡಲೇಬೇಕು. ಸಭೆಯಲ್ಲಿ ಡಿಸಿ, ಎಸ್ಪಿ, ಸಿಇಒ ಗಳಿಗೆ ಸೂಚನೆ ನೀಡಿದ್ರು..
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು
1. ಕೋವಿಡ್ ಸೋಂಕು ತಡೆಗಟ್ಟುವ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
2. ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನ, ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಲಾಗಿದೆ, ಸಾರ್ವಜನಿಕರು ಕೋವಿಡ್ ಸೂಕ್ತ ನಡಾವಳಿ ಅಂದರೇ ಮಾಸ್ಕ ದಾರಣೆ, ಸಾರ್ವಜನಿಕ ಅಂತರ ಕಾಯ್ದುಕೂಳ್ಳುವುದು ಜಿಲ್ಲಾಧಿಕಾರಿಗಳು ಖಚಿತಪಡಿಸಿಕೋಳ್ಳುವುದು.
3. ಕೆಲವು ಜಿಲ್ಲೆಗಳಲ್ಲಿ ಇನ್ನೂ ಕೋವಿಡ್ ಕೇರ್ ಸೆಂಟರುಗಳನ್ನು ತೆರೆದಿಲ್ಲ, ಅಂತಹ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರುಗಳನ್ನು ಆದ್ಯತೆಯ ಮೇರೆಗೆ ತೆರೆಯುಬೇಕು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗು ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರಗಳನ್ನು ತೆರೆಯಬೇಕು ಇದಕ್ಕಾಗಿ ವಸತಿ ಶಾಲೆಗಳು, ಹಾಸ್ಟೆಲಗಳನ್ನು ಬಳಸಿಕೂಳ್ಳಲು ಸೂಚಿಸಿದೆ.
4. ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ರೋಗಿಗಳಿಗೆ ಹಳ್ಳಿಗಳಲ್ಲಿ ಸರಿಯಾದ ಕಾಳಜಿ ವಹಿಸಲು ನಿರ್ದೇಶನ.
5. ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಆಗಿದ್ದು, ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲು ಕ್ರಮ ವಹಿಸುವಂತೆ ಹಾಗೂ ಇವರ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನ್ನು ರಚಿಸುವಂತೆ ಸೂಚನೆ.
6. ಪರೀಕ್ಷೆಗಳನ್ನು ಕೇವಲ ರೋಗಲಕ್ಷಣ ಇದ್ದವರಿಗೆ ಸೀಮಿತ ಮಾಡಿ ಮತ್ತು ಪರೀಕ್ಷಾ ಫಲಿತಾಂಶ 24 ಗಂಟೆಗಳಲ್ಲಿ ಕೊಡುವ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಪರೀಕ್ಷೆಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚನೆ.
7. ಎಲ್ಲಾ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸರಿಯಾದ ಸಮಯದಲ್ಲಿ ತಲುಪುವಂತೆ ಮಾಡಬೇಕು.
8. ಪ್ರತಿ ಆಸ್ಪತ್ರೆಯಲ್ಲಿ ರೆಮಿಡಿಸಿವರ್ ಔಷಧ ಹಾಗೂ ಆಕ್ಸಿಜನ್ ಬಗ್ಗೆ ಆಡಿಟ್ ಆಗಬೇಕು. ಯಾರು ಯಾರಿಗೆ ಅತೀ ಅವಶ್ಯವಿದೆಯೋ ಅವರಿಗೆ ಕೊಡುವ ವ್ಯವಸ್ಥೆ ಮಾಡಬೇಕು.
9. ರೆಮ್ ಡಿಸಿವಿರ್ ಮತ್ತು ಆಕ್ಸಿಜನೇಟೆಡ್ ಬೆಡ್ ಗಳ ವಿವೇಚನಾರಹಿತ ಬಳಕೆಯಾಗದಂತೆ ತಡೆಗಟ್ಟಬೇಕು. ಅಗತ್ಯವಿರುವವರಿಗೆ ಮಾತ್ರ ಈ ಇಂಜೆಕ್ಷನ್ ಹಾಗೂ ಆಕ್ಸಿಜನೇಟೆಡ್ ಬೆಡ್ ಗಳನ್ನು ಒದಗಿಸುವ ಮೂಲಕ ಕೃತಕ ಅಭಾವ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ.
10. ಅಂತೆಯೇ ವೆಂಟಿಲೇಟರ್ ಬೆಡ್ ಗಳನ್ನು ಸಹ ಅತ್ಯಂತ ವಿವೇಚನೆಯಿಂದ ಬಳಸಬೇಕು.
11. ಯಾವುದಾದರೂ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾದರೆ, ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲೆಯಿಂದ ಪಡೆದುಕೊಳ್ಳುವಂತೆ, ಜಿಲ್ಲಾಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಸೂಚನೆ.
12. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಹಾಗೂ ಇತರೆ ಸಂಪನ್ಮೂಲಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳುವಂತೆ ಸೂಚಿಸಲಾಯಿತು.
13. ಮೈಸೂರಿನಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಲ್ಲಿ ಇರುವ ಒಟ್ಟು 5 ಆಕ್ಸಿಜನ್ ಜನರೇಟಿಂಗ್ ಘಟಕಗಳ ಪೈಕಿ ಎರಡು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಮೂರು ಘಟಕಗಳ ದುರಸ್ತಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಯಿತು.
14. ಕೃಷಿ ಚಟುವಟಿಕೆಗಳು, ಸರ್ಕಾರ ಅನುಮತಿಸಿರುವ ಕೈಗಾರಿಕೆ ಮತ್ತಿತರ ಚಟುವಟಿಕೆಗಳು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಬಾಧಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ.
15. ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಇನ್ನು ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಸಿಎಂ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆದಿದೆ.
ಯಾವ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವ್ ಬರ್ತಿದೆ. ಏನೆಲ್ಲಾ ಕ್ರಮ ಕೈಗೊಂಡಿದ್ದಾರೆ.ಈ ಬಗ್ಗೆ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದಾರೆ.
ಕೋವಿಡ್ ಪರಿಹಾರ ನಿಧಿಗೆ ಸಚಿವರ ಒಂದು ವರ್ಷದ ವೇತನ ನೀಡುವುದಾಗಿ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ ಎಂದರು.
ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಕೊರೊನಾ ಹೆಚ್ಚಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ವ್ಯಾಕ್ಸಿಜನ್ ,ಆಕ್ಸಿಜನ್ ಬಗ್ಗೆ ಮಾಹಿತಿ ನೀಡಿದ್ದಾರೆ. ಬಯಲಲ್ಲಿ ಶವ ಸುಡಲು ತಯಾರಿ ನಡೆಸಿದ್ದೇವೆ. ಒಟ್ಟು ೧೦೦ ಶವಗಳನ್ನ ಸುಡುವ ವ್ಯವಸ್ಥೆಯಾಗಿದೆ.230 ಎಕರೆ ಜಮೀನಿನಲ್ಲಿ ಸ್ಮಶಾನಕ್ಕೆ ರೆಡಿ ಮಾಡಿದ್ದೇವೆ ಎಂದು ಆರ್.ಅಶೋಕ್ ತಿಳಿಸಿದ್ರು.
ಈ ಮಧ್ಯ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಎಲ್ಲಾ ಜೈಲಿಗಳಿಗೆ ತೆರಳಿ ಸ್ಯಾನಿಟೈಸರ್ ಮಾಡಲಾಗುತ್ತದೆ. 5 ಮಂದಿ ಎಡಿಜಿಪಿಗಳನ್ನು ಉಸ್ತುವಾರಿಗೆ ನೇಮಿಸಲಾಗಿದೆ.
ಬಾಂಗ್ಲಾ ದೇಶದಿಂದ ಅಕ್ರಮವಾಗಿ ರೆಮ್ ಡಿಸಿವರ್ ಸಪ್ಲೈ ಆಗ್ತಾ ಇದೆ.
ಬಾಂಗ್ಲಾ ದೇಶದಿಂದ ರಮ್ ಡಿಸಿವರ್ ವ್ಯಾಕ್ಸಿನ್ ಲೇಬಲ್ ಹಾಕಿ ಸಪ್ಲೈ ಮಾಡಲಾಗಿದೆ. ಇದರ ಬಗ್ಗೆ ಸಿಸಿಬಿ ತನಿಖೆ ನಡೆಸುತ್ತಿದೆ.ಡಿಸ್ಟ್ರ ಬ್ಯೂಟರ್ ಅರೆಸ್ಟ್ ಮಾಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ,ಬಾಂಗ್ಲಾ ದೇಶದ ಲೇಬಲ್ ಹಾಕಿ ಸಪ್ಲೈ ಮಾಡಿದ್ದಾರೆ. ಎಲ್ಲರನ್ನು ಈಗಾಗಲೇ ಅರೆಸ್ಟ್ ಮಾಡಲಾಗಿದೆ ಎಂದರು.
ಒಟ್ಟಾರೆ ಎಲ್ಲಾ ಡಿಸಿಗಳಿಗೂ ಸಿಎಂ ಖಡಕ್ ಸೂಚನೆ ಕೊಟ್ಟಿದ್ದು,ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸಿ ,ಜನರ ಸಮಸ್ಯೆ ಬಗೆಹರಿಸಿ ಎಂದು ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸಂದೇಶ ರವಾನಿಸಿದ್ದಾರೆ..