ಕೇಂದ್ರ ಆಹಾರ ಹಾಗೂ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಬೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ :ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ, ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಕಪಿಲ್ ಮೋಹನ್ ಮತ್ತಿತರರು ಇದ್ದರು