CM: ಜೂನ್ 16 ರಂದು ದಾವಣಗೆರೆಗೆ ಮುಖ್ಯಮಂತ್ರಿಗಳ ಪ್ರವಾಸ

ದಾವಣಗೆರೆ (CM): ರಾಜ್ಯದ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯನವರು ಜೂನ್ 16 ರ ಬೆಳಿಗ್ಗೆ 11.15ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ನಗರದ ಎಂಬಿಎ ಕಾಲೇಜು ಆವರಣದ ಹೆಲಿಪ್ಯಾಡ್ಗೆ ಆಗಮಿಸುವರು.
ನಂತರ ಶಾಮನೂರು ಶಿವಶಂಕರಪ್ಪನವರ 95ನೇ ಹುಟ್ಟು ಹಬ್ಬದ ಪ್ರಯುಕ್ತ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸಿರುವ ಉಚಿತ ಮತ್ತು ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸುವರು.
ಮಧ್ಯಾಹ್ನ 12 ಗಂಟೆಗೆ ಆರ್.ಎಂ.ಸಿ. ಲಿಂಕ್ ರಸ್ತೆಯಲ್ಲಿನ ಶ್ರೀ ಕಲ್ಲೇಶ್ವರ ಇಂಡಸ್ಟ್ರೀಸ್ ಆವರಣದಲ್ಲಿ ಆಧುನಿಕ ತಂತ್ರಜ್ಞಾನದ ನೂತನ ತೊಗರಿಬೇಳೆ ಹಾಗೂ ಕಡ್ಲೇಬೇಳೆ ಮಿಲ್ಗಳ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ 12.45 ಕ್ಕೆ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿರುವ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 4 ಗಂಟೆಗೆ ಎಂಬಿಎ ಕಾಲೇಜು ಆವರಣದಿಂದ ಹೆಲಿಕ್ಯಾಪ್ಟರ್ ಮೂಲಕ
ಬೆಂಗಳೂರಿಗೆ ಪ್ರಯಾಣಿಸುವರು.