Coal & Power Issue: ಕಲ್ಲಿದ್ದಲು ಹಾಗೂ ವಿದ್ಯೂತ್ ಅಭಾವದ ಬಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಏನು ಹೇಳಿದ್ರು.!?
ದಾವಣಗೆರೆ: ರಾಜ್ಯದಲ್ಲಿ ವಿದ್ಯುತ್ ಕೊರತೆ ಆಗುತ್ತದೆ ಎನ್ನುವುದನ್ನು ತಳ್ಳಿಹಾಕಿರುವ ಇಂಧನ ಸಚಿವ ಸುನಿಲ್ ಕುಮಾರ್ ಇದು ಕೇವಲ ಊಹಾಪೋಹ ಅಷ್ಟೆ ಎಂದು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಲ್ಲಿದ್ದಲು ಮತ್ತು ವಿದ್ಯುತ್ ಉತ್ಪಾದನೆಯಲ್ಲಿ ಅಭಾವ ಉಂಟಾಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಕೇಂದ್ರ ಸರ್ಕಾರ ಕೂಡ ರಾಜ್ಯದ ಬೇಡಿಕೆಗೆ ತಕ್ಕಂತೆ ಸ್ಪಂದಿಸಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಪ್ರತಿದಿನ ರಾಜ್ಯಕ್ಕೆ ೮ ರೈಲುಗಳಲ್ಲಿ ಕಲ್ಲಿದ್ದಲ್ಲು ಕಳುಹಿಸಿಕೊಡುತ್ತಿದೆ. ಇನ್ನೂ ಹೆಚ್ಚುವರಿಯಾಗಿ ಎರಡು ರೇಕ್ಸ್‌ಗಳು ಬೇಕು ಎಂಬ ರಾಜ್ಯದ ಬೇಡಿಕೆಗೆ ಕೇಂದ್ರ ಸ್ಪಂದಿಸಿದ್ದು, ಇಂದು ಅದನ್ನೂ ಕೂಡ ಕಳುಹಿಸಿಕೊಟ್ಟಿದೆ ಎಂದರು.
*ರಾಜ್ಯದಲ್ಲಿ ಕಲ್ಲಿದ್ದಲು ಹಾಗುಇ ವಿದ್ಯುತ್ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೆವೆ ಸಚಿವ ಸುನಿಲ್ ಕುಮಾರ್*
ಎಂಸಿಎಎಲ್ ನಿಂದ ನಿನ್ನೆ ಕಲ್ಲಿದ್ದಲು ತುಂಬಿಕೊಂಡು ಹೊರಟಿದ್ದ ಒಂದು ರೇಕ್ಸ್ ಇಂದು ಮುಂಜಾನೆ ರಾಜ್ಯಕ್ಕೆ ಬಂದಿದ್ದು, ಇದರಿಂದ ರಾಯಚೂರು ಮತ್ತು ಬಳ್ಳಾರಿ ಶಾಖೋತ್ಪನ್ನ ಘಟಕಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದರು.
ನವೆಂಬರ್ ಅಂತ್ಯದ ವೇಳೆಗೆ ಇನ್ನೂ ಎರಡು ರೇಕ್ಸ್‌ಗಳನ್ನು ಹೆಚ್ಚು ಮಾಡಬೇಕೆಂಬ ರಾಜ್ಯದ ಬೇಡಿಕೆಗೆ ಕೇಂದ್ರ ಒಪ್ಪಿಗೆ ನೀಡಿದೆ. ಆದ್ದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಅಭಾವ ತಲೆದೋರುವುದಿಲ್ಲ ಎಂದರು.
ಸಿಂಧಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಎರಡೂ ಕ್ಷೇತ್ರಗಳನ್ನು ನಿಶ್ಚಿತವಾಗಿ ಗೆಲ್ಲುತ್ತೇವೆ. ಈ ಚುನಾವಣೆಯ ಫಲಿತಾಂಶವನ್ನು ಆಧಾರವಾಗಿಟ್ಟುಕೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ತಯಾರಿ ನಡೆಸುತ್ತೇವೆ ಎಂದು ಹೇಳಿದರು.