ಜಿಲ್ಲೆಯಲ್ಲಿ ಮತದಾರರ ಮಾಹಿತಿ ಸಂಗ್ರಹಣೆ ಹಾಗೂ ಸಮೀಕ್ಷೆ : ಖಾಸಗಿ ಸಂಘ-ಸಂಸ್ಥೆಗಳ ನಿಷೇಧ

ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಖಾಸಗಿ ವ್ಯಕ್ತಿ ಹಾಗೂ ಸಂಘ-ಸಂಸ್ಥೆಗಳು ಮತದಾರರಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಭೌತಿಕವಾಗಿ ಅಥವಾ ಮಾಹಿತಿ ತಂತ್ರಜ್ಞಾನ ಸಲಕರಣೆಗಳ ಮೂಲಕ ಸಂಗ್ರಹಣೆ ಮಾಡುವುದು, ಮನೆ-ಮನೆ ಸಮೀಕ್ಷೆ ಮಾಡುವುದು ಹಾಗೂ ಗುರುತಿನ ಚೀಟಿಗಳನ್ನು ದುರ್ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆ, ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ ಮುದ್ದಾಂ ದೂರು ಸಲ್ಲಿಸಬಹುದು ಅಥವಾ ಜಿಲ್ಲಾ ಮತದಾರರ ಸಹಾಯವಾಣಿ ಸಂಖ್ಯೆ 1950 ಕೆ ಹಾಗೂ ಜಿಲ್ಲಾ ದೂರು ನಿರ್ವಹಣಾ ಕೇಂದ್ರ ದೂ.ಸಂ.08192-272953ಕ್ಕೆ ಕಚೇರಿ ಸಮಯದಲ್ಲಿ ಕರೆಮಾಡಿ ದೂರು ಸಲ್ಲಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
                         
                       
                       
                       
                       
                       
                       
                      