ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್; ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕೆ ನಿರ್ಬಂಧ

ಕರ್ನಾಟಕದಲ್ಲಿ ಕಲರ್‌ ಕಾಟನ್‌ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್‌ ಕಾಟನ್‌ ಕ್ಯಾಂಡಿಯನ್ನು ನಿಷೇಧಿಸಲಾಗಿದೆ. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿ ಸರ್ಕಾರ ಆದೇಶಿಸಿದೆ.

ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ. ಕೃತಕ ಬಣ್ಣ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಾಲಾಗುವುದು. ರಾಜ್ಯದಾದ್ಯಂತ 171 ಗೋಬಿ ಮಂಚೂರಿ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ, ಅವುಗಳ ಪೈಕಿ 107 ಗೋಬಿ ಮಂಚೂರಿಗಳಲ್ಲಿ ಹಾನಿಕಾರಕ ಕೃತಕ ಬಣ್ಣಗಳನ್ನು ಬಳಸಲಾಗಿದೆ ಎಂದು ವರದಿಯಾಗಿದೆ.
ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ- 2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು 5.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಆಯುಕ್ತರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ. ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!