ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ

ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ

ಹೊಸದಿಲ್ಲಿ  : ಮಂಗಳವಾರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 7 ರೂ. ಹೆಚ್ಚಿಸಲಾಗಿದೆ ಈ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.  3 ತಿಂಗಳ ಬಳಿಕ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಮತ್ತೆ ಹೆಚ್ಚಿಸಲಾಗಿದೆ. ಈ ಬದಲಾವಣೆಯ ನಂತರ, ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ ಪ್ರಸ್ತುತ ಚಿಲ್ಲರೆ ಬೆಲೆ 1,780 ರೂ. ಗೆ ಏರಿಕೆಯಾಗಲಿದೆ.

‘’ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 7 ರೂ. ಹೆಚ್ಚಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದೆಹಲಿ ಚಿಲ್ಲರೆ ಮಾರಾಟದ ಬೆಲೆ ಪ್ರತಿ ಸಿಲಿಂಡರ್‌ಗೆ ರೂ. 1,773 ರಿಂದ ರೂ. 1,780 ಕ್ಕೆ ಏರಿಕೆಯಾಗಿದೆ. ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ’’ ಎಂದು ಸುದ್ದಿಸಂಸ್ಥೆ ಎಎನ್‌ಐ ಸಹ ಟ್ವೀಟ್‌ ಮಾಡಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!