ಕೇಂದ್ರ ಬಜೆಟ್ ಅಭಿವೃದ್ಧಿಗೆ ಪೂರಕ – ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ. ಹಾಲೇಶಪ್ಪ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ. ಹಾಲೇಶಪ್ಪ
ದಾವಣಗೆರೆ : ಈ ಬಾರಿಯ ಕೇಂದ್ರ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಹಾಲೇಶಪ್ಪ ಹೇಳಿದರು. ವಿಶೇಷವಾಗಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಮೀಸಲು ಇಟ್ಟಿರುವುದು ಕರ್ನಾಟಕದ ಒಣಭೂಮಿ ಪ್ರದೇಶದ ಕೃಷಿ ಭೂಮಿಗಳ ಅಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿಗೆ ಮತ್ತಷ್ಟು ಅನುಕೂಲ ಆಗುತ್ತದೆ ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಇನ್ನು ಜಾಗತಿಕ ಮಟ್ಟದಲ್ಲಿ ಸಿರಿಧಾನ್ಯಕ್ಕೆ ಹೆಚ್ಚು ಒತ್ತು ನೀಡಿ ರಾಗಿ, ಅಕ್ಕಿ, ಜೋಳ, ನವಣೆಗಳ ಮೂಲಕ ದೇಶದ ಒಂದು ಕೋಟಿ ರೈತರಿಗೆ ಸಿರಿ ಧಾನ್ಯ ಬೆಳೆಯಲು ಪ್ರೋತ್ಸಾಹ ನೀಡುತ್ತಿರುವುದು ಸ್ವಾಗತಾರ್ಹ. ವಿಶೇಷವಾಗಿ ಜಾಗತಿಕ ಮಟ್ಟದಲ್ಲಿ ಆಹಾರ ಭದ್ರತೆಗೆ ಸಹಕಾರಿಯಾಗಲಿದೆ.
ದೇಶಾದ್ಯಂತವಿರುವ ರೈತರ ಸಹಕಾರ ಪತ್ತಿನ ಬ್ಯಾಂಕ್ ಗಳ ಅಭಿವೃದ್ಧಿಗೆ 93ಸಾವಿರ ಕೋಟಿ ರೂ.ಗಳ ಹಣ ಮೀಸಲಿರಿಟ್ಟಿರುವುದು ದೇಶದ ರೈತರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
