ಲೋಕಲ್ ಸುದ್ದಿ

ಬುಧವಾರ ವೀರಶೈವ ಲಿಂಗಾಯತ ನೂತನ ಸಚಿವರು-ಶಾಸಕರಿಗೆ ಅಭಿನಂದನೆ

ಬುಧವಾರ ವೀರಶೈವ ಲಿಂಗಾಯತ ನೂತನ ಸಚಿವರು-ಶಾಸಕರಿಗೆ ಅಭಿನಂದನೆ

ದಾವಣಗೆರೆ: 16ನೇ ವಿಧಾನಸಭೆಗೆ ಆಯ್ಕೆಯಾದ ನೂತನ ಸಚಿವರು ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಜು.5ರ ಬುಧವಾರ ಸಂಜೆ ಹಮ್ಮಿಕೊಳ್ಳಲಾಗಿದೆ. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಾರ್ಯಕ್ರಮ ಆಯೋಜಿಸಿದ್ದು, ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ   ಕಾರ್ಯಕ್ರಮ ನಡೆಯಲಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಮಧ್ಯ ಕರ್ನಾಟಕ ವಿಭಾಗದ ಉಪಾಧ್ಯಕ್ಷ ಎಂ. ಲೋಕೇಶಯ್ಯ, ಸಂಜೆ 5 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡಗಾಂವ ಹಿರೇಮಠದ ಶ್ರೀ ಡಾ.ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ ಎಂದು ಹೇಳಿದರು. ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ, ಇಂಧನ ರಾಜ್ಯ ಸಚಿವ ಭಗವಂತ ಖೂಬಾ, ತೆಲಂಗಾಣದ ಲೋಕಸಭಾ ಸದಸ್ಯ ಬಿ.ಬಿ. ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ದಾವಣಗೆರೆಯ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ 16ನೇ ವಿಧಾನಸಭೆಗೆ ಆಯ್ಕೆಯಾದ ಎಲ್ಲಾ ಶಾಸಕರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹೆಚ್.ಸಿ. ಭಾಗ್ಯ, ಓಂಕಾರಮೂರ್ತಿ ಕೆ.ಎಂ. ಗಂಗಾಧರ ಎನ್.ಎಸ್.ಎಂ., ಕೆ.ವಿ. ಕಿರಣ್, ಶಶಿಕುಮಾರ್ ಇತರರು ಉಪಸ್ಥಿತರಿದ್ದರು

Click to comment

Leave a Reply

Your email address will not be published. Required fields are marked *

Most Popular

To Top