ಬಿಜೆಪಿಯವರು ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ: ಡಿ ಬಸವರಾಜ್

IMG-20211106-WA0091

ದಾವಣಗೆರೆ: ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿರುವುದನ್ನು ನೋಡಿ ಸಹಿಸಿಕೊಳ್ಳದೇ ಬಿಜೆಪಿಯವರು ಮಾಜಿ ಸಿಎಂ ಸಿದ್ದರಾಮಯ್ಯ ಅವರು ದಲಿತ ವಿರೋಧಿ ಎಂಬ ಅಪಪ್ರಚಾರ ಮಾಡುತ್ತ ಮತದಾರರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್ ಕ್ಷೇತ್ರ ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆಯಾಗಿರುವ ಹಾವೇರಿಗೆ ಸೇರಿದ್ದು, ಅಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಕಂಡಿರುವುದು ಬಿಜೆಪಿಗರಿಗೆ ತೀವ್ರ ಮುಖಭಂಗವಾಗಿದೆ. ಆದ್ದರಿಂದ, ಈಗ ಮತದಾರರ ಗಮನ ಬೇರೆಡೆ ಸೆಳೆಯಲು ತಂತ್ರ ಹೂಡಿರುವ ಅವರು ದಲಿತರ ಪರವಾಗಿರುವ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಅಪಪ್ರಚಾರ ಮಾಡಲು ಹೊರಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಲ್ಲಿ ನಿಂತರೂ ನಾವು ಅವರನ್ನು ಸೋಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಈಶ್ವರಪ್ಪ ಅವರಿಗೆ ಬಾಯಿಗೂ ಮೆದುಳಿಗೂ ಕನೆಕ್ಷನ್ ಇದ್ದಂತಿಲ್ಲ. ಸಿದ್ದರಾಮಯ್ಯ ಯಾವ ಕ್ಷೇತ್ರಕ್ಕೂ ನಿಂತರು ಅವರು ಸಿಎಂ ಆಗಿದ್ದಾಗ ಮಾಡಿದ ಜನಪರ ಕೆಲಸಗಳಿಂದಾಗಿ ಅವರು ಗೆಲ್ಲುತ್ತಾರೆ. ಈಶ್ವರಪ್ಪ ಶಿವಮೊಗ್ಗ ಬಿಟ್ಟು ಬೇರೆ ಕ್ಷೇತ್ರಗಳಲ್ಲಿ ನಿಂತು ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.

ಸಿಎಂ ಬೊಮ್ಮಾಯಿ ಅವರು ನೂರು ದಿನಗಳ ಸಾಧನೆ ಮಾಡಿರುವುದಾಗಿ ಜಾಹೀರಾತು ನೀಡಿದರು. ಅವರು  ಸಿಎಂ ಖುರ್ಚಿಗೇರಿ ನೂರು ದಿನಗಳಲ್ಲಿ ಯಡಿಯೂರಪ್ಪ ಮತ್ತು ಹೈಕಮಾಂಡ್ ಕಡೆಗೆ ಎಡತಾಕಿರುವುದೇ ಇವರ ಸಾಧನೆ ಎಂದು ಲೇವಡಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಚಮನ್‌ಸಾಬ್, ಪಿ. ರಾಜಕುಮಾರ್, ಎಲ್.ಎಂ.ಹೆಚ್. ಸಾಗರ್, ಮಹಮದ್ ಜಿಕ್ರಿಯಾ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!