ಕಾಂಗ್ರೇಸ್ ನಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ : ಗೊವಿಂದ್ ಕಾರಜೋಳಗೆ ಟಾಂಗ್ ಕೊಟ್ಟ ಎಸ್ ಎಸ್ ಮಲ್ಲಿಕಾರ್ಜುನ

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಮ್ಮ ತಂದೆಯವರಾದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪಗೆ ಮುಖ್ಯಮಂತ್ರಿ ಸ್ಥಾನ ಸಿಗಲು ಬೆಂಬಲಿಸುವುದಾಗಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ ಎಂದು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಎದ್ದಿರುವ ಕೂಗಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲರಿಗೂ ಸಿಎಂ ಆಗಬೇಂದಿರುತ್ತದೆ. ಅವರವರ ವೈಯಕ್ತಿಕ ಅಭಿಪ್ರಾಯ ಅವರು ತಿಳಿಸುತ್ತಾರೆ. ನಮ್ಮ ತಂದೆಯವರು ರಾಜಕಾರಣಕ್ಕೆ ಪ್ರವೇಶ ಮಾಡಿದ್ದೇ ಕಾಂಗ್ರೆಸ್ ನಿಂದ.ಹಲವು ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದಾರೆ ಎಂದರು.
ಸಿಎಂ ಆಗಲು ಎಲ್ಲರಿಗೂ ಆಸೆ ಇರುತ್ತದೆ. ನನಗೂ ಆಸೆಯಿದೆ. ಚುನಾವಣೆಯಲ್ಲಿ ನಿಲ್ಲದವರನ್ನೂ ಮಂತ್ರಿ ಮಾಡಿರುವ ಉದಾಹರಣೆಗಳಿವೆ. ಹಾಗೊಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ನ ಹಿರಿಯ ಶಾಸಕರಾದ ನಮ್ಮ ತಂದೆ ಶಾಮನೂರು ಶಿವಶಂಕರಪ್ಪ ಅವರು ಮುಖ್ಯಮಂತ್ರಿ ಆಗಲು ತಾವು ಬೆಂಬಲಿಸುವುದಾಗಿ ಬಿಜೆಪಿಯ ಮುಖಂಡರು, ರಾಜ್ಯದ ಡಿಸಿಎಂ ಆಗಿರುವ ಗೋವಿಂದ ಕಾರಜೋಳ ಬೆಂಬಲಿಸಿದ್ದಾರೆ ಎಂದರು.
ನಮ್ಮ ಕಾಂಗ್ರೆಸ್ ನಲ್ಲಿ ಜಾತಿ ರಾಜಕಾರಣ ಇಲ್ಲ. ಇಲ್ಲಿ ಗೆದ್ದವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪಕ್ಷದ ಹೈಕಮಾಂಡ್ ಮತ್ತು ಶಾಸಕರೆಲ್ಲರೂ ಆಯ್ಕೆ ಮಾಡುತ್ತಾರೆ ಇದು ಕಾಂಗ್ರೆಸ್ ಸಂಸ್ಕೃತಿ ಎಂದು ಬಿಜೆಪಿಗೆ ಚಾಟಿ ಬೀಸಿದರು.