ಎಸ್ಸೆಸ್,ಎಸ್ಸೆಸ್ಸೆಂ ಸೂಚನೆ ಮೇರೆಗೆ ಕಾಂಗ್ರೆಸ್ ನಿಯೋಗ ಭೇಟಿ

ಎಸ್ಸೆಸ್,ಎಸ್ಸೆಸ್ಸೆಂ ಸೂಚನೆ ಮೇರೆಗೆ ಕಾಂಗ್ರೆಸ್ ನಿಯೋಗ ಭೇಟಿ

ದಾವಣಗೆರೆ: ದಾವಣಗೆರೆ ನಗರದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ನಿಯೋಗ ಭೇಟಿ ನೀಡಿ ಮಹಿಳೆಯರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು.

ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಸೂಚನೆ ಮೇರೆಗೆ ಇಂದು ದಾವಣಗೆರೆ ಒನ್ ಕೇಂದ್ರಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮತ್ತು ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್ ಭೇಟಿ ನೀಡಿದ ನಿಯೋಗ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ, ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರಲಿದೆ ಎಂದರು.

ಗೃಹಲಕ್ಷ್ಮೀ: ಪ್ರತಿಯೊಬ್ಬರಿಗೂ ಅರ್ಜಿ ಸಲ್ಲಿಸಲು ಅವಕಾಶ

ಅರ್ಜಿ ಸಲ್ಲಿಕೆಗಾಗಿ ಯಾರಾದರೂ ಹಣ ನೀಡುವಂತೆ ಒತ್ತಾಯಿಸಿದಲ್ಲಿ ನಮ್ಮ ಗಮನಕ್ಕೆ ತರುವಂತೆ ತಿಳಿಸಿದ ಮಧ್ಯವರ್ತಿಗಳ ಹಾವಳಿಯಿಲ್ಲದೆ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸಬೇಕು, ಸರ್ಕಾರದ ಯೋಜನೆಗಳ ಗರಿಷ್ಠ ಲಾಭ ಫಲಾನುಭವಿಗಳಿಗೆ ಸಿಗಬೇಕು ಎಂಬುದು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ಆಶಯವಾಗಿದೆ ಎಂದರು.

ಸದ್ಯಕ್ಕೆ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಲಾಗುತ್ತಿದೆ. ಯೋಜನೆಯ ನೋಂದಣಿಗಾಗಿ ಪ್ರಜಾಪ್ರತಿನಿಧಿಗಳನ್ನು ಸರ್ಕಾರ ಶೀಘ್ರ ನೇಮಕ ಮಾಡಿಕೊಳ್ಳಲಿದೆ. ಬಳಿಕ ಪ್ರಜಾಪ್ರತಿನಿಧಿಗಳೇ ಮನೆ, ಮನೆಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಬ್ಯಾಂಕ್ ಹನುಮಂತಪ್ಪ, ಗೋಪಾಲ್, ಆರೋಗ್ಯ ಸ್ವಾಮಿ, ಸತೀಶ್ ಶೆಟ್ಟಿ ಇನ್ನು ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!