ಸೆಪ್ಟಂಬರ್ 24ರಂದು ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ; ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಆಗಮನ

ದಾವಣಗೆರೆ: ದಾವಣಗೆರೆ ಲೋಕಸಭಾ ಚುನಾವಣೆ ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಚರ್ಚಿಸಲು ಜಿಲ್ಲಾ ಕಾಂಗ್ರೆಸ್ನ ಮುಂಚೂಣಿ ಘಟಕದ ಪದಾಧಿಕಾರಿಗಳ ಸಭೆಯನ್ನು ದಿನಾಂಕ: 24-09-2024ರಂದು ಮಧ್ಯಾಹ್ನ 12-00 ಗಂಟೆಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಎಸ್.ಭವನದಲ್ಲಿ ಕರೆಯಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಕರೆದಿರುವ ಈ ಸಭೆಯಲ್ಲಿ ಸಚಿವರು, ಶಾಸಕರು, ಸಂಸದರು ಭಾಗವಹಿಸಲಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ನ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರು ಆಗಮಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
ಆದ ಕಾರಣ ಕೆಪಿಸಿಸಿ ಸದಸ್ಯರು, ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಿಸಾನ್ ಕಾಂಗ್ರೆಸ್, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಗಮಿಸುವಂತೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಜಿ.ಸಿ.ನಿಂಗಪ್ಪ ಹದಡಿ, ಕೆ.ಜಿ.ಶಿವಕುಮಾರ್, ಬಿ.ಕೆ.ಪರಶುರಾಮ ಮಾಗಾನಹಳ್ಳಿ ಕೋರಿದ್ದಾರೆ.