Congress: ಮುಖ್ಯಮಂತ್ರಿ ಜೊತೆ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಶಾಸಕರ ಸಭೆ: ಹೆಚ್ಚುವರಿ ಅನುದಾನಕ್ಕೆ ಮನವಿ

IMG-20250731-WA0023

ಬೆಂಗಳೂರು, ದಾವಣಗೆರೆ: (Congress) ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಸನ್ಮಾನ್ಯ ಶ್ರೀ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಾವಣಗೆರೆ ಜಿಲ್ಲೆಯ ಅಭಿವೃದ್ಧಿ ಕುರಿತಾಗಿ ಚರ್ಚಿಸಲಾಯಿತು.

ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಅವರ ಮುಂದಾಳತ್ವದಲ್ಲಿ ನಡೆದ ಸಭೆಯಲ್ಲಿ ಎರಡು ವರ್ಷದಲ್ಲಿ ಜಿಲ್ಲೆಯಲ್ಲಿ ಕೈಗೊಂಡ ಪ್ರಗತಿಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಲಾಯಿತು.

ಕಾಂಗ್ರೆಸ್ ಪಕ್ಷದ ಶಾಸಕರ ಸಹ ಭಾಗಿತ್ವದಲ್ಲಿ ನಡೆದ ಸಭೆಯಲ್ಲಿ
ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಈಗಾಗಲೇ 50 ಕೋಟಿ ರೂಪಾಯಿ ಮೀಸಲಿರಿಸಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಹೆಚ್ಚುವರಿಯಾಗಿ ಅನುದಾನವನ್ನು ಬಿಡುಗಡೆ ಮಾಡುವಂತೆ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನು ಮಾಡಲಾಯಿತು.

ರಾಜನಹಳ್ಳಿ ಏತ ನೀರಾವರಿ ಯೋಜನೆ- ಎನ್‌ಹೆಚ್-48ರ ಮುಖಾಂತರ ಪೈಪ್‌ಲೈನ್ ಅಳವಡಿಕೆ, ರೈಸಿಂಗ್‌ಮೇನ್ ಎಂಎಸ್-ಪೈಪ್‌ಲೈನ್ ದುರಸ್ತಿ, Dl Pipe ಅಳವಡಿಕೆ ಸರಪಳಿ 3.80 ಕಿ.ಮೀ (ಜಾಕ್‌ವೆಲ್-1) ರಿಂದ ಸರಪಳಿ 21.50 ಕಿ.ಮೀ (ಜಾಕ್‌ವೆಲ್-2). 0.75.00 ಕೋಟಿ ಅಂದಾಜು ಮೊತ್ತದ ಕಾಮಗಾರಿಗೆ ಅನುಮೋದನೆ ನೀಡುವಂತೆ ಕೋರಿದ ಸಚಿವರು, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಭೈರನಪಾದ ಏತ ನೀರಾವರಿ ಯೋಜನೆಯ ವಿಸ್ತ್ರತ ಯೋಜನಾ ವರದಿ ತಯಾರಿಸಲು (ಡಿಪಿಆರ್) ಅನುಮೋದಿಸಿ, ಆಡಳಿತಾತ್ಮಕ ಅನುಮೋದನೆ, ಮಂಜೂರಾತಿ ಜೊತೆಗೆ ಅನುದಾನ ಬಿಡುಗಡೆ ಮಾಡುವ ಕುರಿತು ಚರ್ಚಿಸಿದರು.

ದಾವಣಗೆರೆ ತಾಲ್ಲೂಕಿನ ಬೇತೂರು, ಮಾಗನಹಳ್ಳಿ, ರಾಂಪುರ, ಮೇಗಲಗೇರಿ ಮತ್ತು ಕಾಡಜ್ಜಿ ಗ್ರಾಮಗಳ ಕೆರೆಗಳನ್ನು ತುಂಗಾಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು ರೂ.135.00 ಕೋಟಿಗಳ ಮೊತ್ತದಲ್ಲಿ ಕೈಗೊಳ್ಳುವ ಬಗ್ಗೆ ಕೋರಿ,
2025-26ನೇ ಸಾಲಿಗೆ ಭದ್ರಾ ಜಲಾಶಯದ ಅಚ್ಚುಕಟ್ಟಿನ ಕೊನೆಯ ಭಾಗದ ರೈತರುಗಳ ಹಿತದೃಷ್ಠಿಯಿಂದ ಜಮೀನುಗಳಿಗೆ ಸಮರ್ಪಕವಾಗಿ ನೀರು ಒದಗಿಸುವಂತೆ ರೂ.150.00 ಕೋಟಿಗಳ ಮೊತ್ತವನ್ನು ವಿಶೇಷ ಅನುದಾನದ ಅಡಿಯಲ್ಲಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ದಾವಣಗೆರೆ ನಗರದ ವ್ಯಾಪ್ತಿಯಲ್ಲಿ ಹೊಸದಾಗಿ ಮೆಟ್ರಿಕ್ ನಂತರದ, ವಿದ್ಯಾರ್ಥಿ ನಿಲಯಗಳ ಕಟ್ಟಡಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುವಂತೆ ಕೋರಿದ ಸಚಿವರು,
ದಾವಣಗೆರೆ ತಾಲ್ಲೂಕು ತುರ್ಚಘಟ್ಟ ಗ್ರಾಮದಲ್ಲಿ 500 ಬಂದಿಗಳ ಸಾಮರ್ಥ್ಯದ ನೂತನ ಜಿಲ್ಲಾ ಕಾರಾಗೃಹ ಹಾಗೂ ಹೆಚ್ಚುವರಿ ಬ್ಯಾರೆಕ್ ನಿರ್ಮಾಣದ ಕಾಮಗಾರಿಗಳಿಗೆ ಮತ್ತು ಇತರೇ ಕಾಮಗಾರಿಗಳಿಗೆ ಒಟ್ಟು ರೂ.97.03 ಕೋಟಿಗಳ ಮೊತ್ತಕ್ಕೆ ಮಂಜೂರಾತಿ ನೀಡಿ, ಅನುದಾನ ಬಿಡುಗಡೆ ಮಾಡುವಂತೆ ಮನವಿಯನ್ನು ಮಾಡಿದರು.

ದಾವಣಗೆರೆ ತಾಲ್ಲೂಕು ತುರ್ಚಘಟ್ಟ ಗ್ರಾಮದಲ್ಲಿ 500 ಬಂದಿಗಳ ಸಾಮರ್ಥ್ಯದ ನೂತನ ಜಿಲ್ಲಾ ಕಾರಾಗೃಹ ಹಾಗೂ ಹೆಚ್ಚುವರಿ ಬ್ಯಾರೆಕ್ ನಿರ್ಮಾಣದ ಕಾಮಗಾರಿಗಳಿಗೆ ಮತ್ತು ಇತರೇ ಕಾಮಗಾರಿಗಳಿಗೆ ಒಟ್ಟು ರೂ.97.03 ಕೋಟಿಗಳ ಮೊತ್ತಕ್ಕೆ ಮಂಜೂರಾತಿ ನೀಡಿ, ಅನುದಾನ ಬಿಡುಗಡೆ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಿದ್ದು, ಹರಿಹರ ನಗರಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಗೆ ಅಂದಾಜು ರೂ.15.00 ಕೋಟಿಗಳ ಮೊತ್ತವನ್ನು ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಸವರಾಜ ರಾಯರಡ್ಡಿ, ಚನ್ನಗಿರಿಯ ಶಾಸಕ ಶಿವಗಂಗಾ ಬಸವರಾಜ್, ಜಗಳೂರು ಶಾಸಕ ವೈ.ಡಿ ದೇವೇಂದ್ರಪ್ಪ, ಮಾಯಕೊಂಡ ಶಾಸಕ ಬಸವಂತಪ್ಪ, ಹೊನ್ನಾಳಿಯ ಶಾಸಕರಾದ ಡಿ.ಜಿ ಶಾಂತನಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳು

error: Content is protected !!