ಬೆಂಗಳೂರು, ಆ.26: ಬಿಜೆಪಿ ಮುಖಂಡರ ವಲಸೆ ಬಗ್ಗೆ ತೆರೆಮರೆಯಲ್ಲಿ ಚಟುವಟಿಕೆಗಳು ನಡೆದಿರುವ ಹೊತ್ತಿನಲ್ಲೇ ಪಕ್ಷದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಕಾಂಗ್ರೆಸ್ (congress) ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ (dk shivkumar) ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ (MP Renukacharya) ಅವರು ತಮ್ಮ ಹೊನ್ನಾಳಿ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಉಭಯ ನಾಯಕರಿಗೆ ರೇಣುಕಾಚಾರ್ಯ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇವರು ಕಾಂಗ್ರೆಸ್ ಸೇರುವವರಿದ್ದಾರೆಯೇ ಎಂಬ ಪ್ರಶ್ನೆಗಳು ಸಹ ಮೂಡಿವೆ.
IPS Uma Prashanth; ದಾವಣಗೆರೆ ನೂತನ ಎಸ್‍ಪಿಯಾಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ
ರೇಣುಕಾಚಾರ್ಯ ಸ್ಪಷ್ಟನೆ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನಾನು ಬಿಜೆಪಿಯಲ್ಲೇ ಇದ್ದೇನೆ. ನಾನು ಕಾಂಗ್ರೆಸ್ ಸೇರುವ ಬಗ್ಗೆ ಮಾತನಾಡಲು ಭೇಟಿಯಾಗಿಲ್ಲ. ನನಗೆ ಕಾಂಗ್ರೆಸ್ ನಿಂದ ಆಹ್ವಾನವೂ ಬಂದಿಲ್ಲ. ವರಮಹಾಲಕ್ಷ್ಮೀ ಹಬ್ಬದ ಶುಭಾಶಯ ತಿಳಿಸಿ ಹೊನ್ನಾಳಿ, ನ್ಯಾಮತಿಯನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಮನವಿ ಮಾಡಲು ಆಗಮಿಸಿದ್ದೆ. ನಾನು ಚುನಾವಣೆಯಲ್ಲಿ ಸೋತಿದ್ದರೂ ಆ ತಾಲೂಕಿನ ಜನರು ರಾಜಕೀಯ ಭವಿಷ್ಯ ನೀಡಿದ್ದಾರೆ. ಹೀಗಾಗಿ ಬರಪೀಡಿತ ತಾಲೂಕು ಆಗಿ ಘೋಷಿಸಲು ಮನವಿ ಮಾಡಿದ್ದೇನೆ ಎಂದರು.
ಎಸ್ ಎಸ್ ಮಲ್ಲಿಕಾರ್ಜುನ್ ಭೇಟಿ: ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನ ಭೇಟಿಯಾಗಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನ ಬರ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಶಿಫಾರಸ್ಸು ಮಾಡಲು ಮನವಿ ನೀಡಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಲಾಯಿತು.
ಕಂದಾಯ ಸಚಿವರ ಭೇಟಿ; ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರನ್ನ ಭೇಟಿಯಾಗಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನ ಬರ ತಾಲೂಕುಗಳ ಪಟ್ಟಿಗೆ ಸೇರಿಸಬೇಕೆಂದು ಮನವಿ ನೀಡಿದೆನು.
