ಕಾಂಗ್ರೆಸ್ ಪಕ್ಷದ ನಾಯಕನಿಗೆ ಚಾಕು ಇರಿತ
ಕಾಗವಾಡ: ಕಾಗವಾಡ ತಾಲ್ಲೂಕು ಕಾಂಗ್ರೆಸ್‌ನ ಯುವ ಘಟಕದ ಅಧ್ಯಕ್ಷ ಪ್ರಶಾಂತ ಅಪರಾಜ ಅವರಿಗೆ ಅಪರಿಚಿತರು ಚಾಕು ಇರಿದು ಪರಾರಿಯಾಗಿದ್ದಾರೆ.
ಐನಾಪುರ ಪಟ್ಟಣದಲ್ಲಿ ಸೋಮವಾರ ಸಂಜೆ ಅಪರಿಚಿತರು ಚಾಕು ಇರಿದು ಪರಾರಿಯಾಗಿದ್ದು, ಅದೃಷ್ಟವಶಾತ್ ಪ್ರಶಾಂತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಐನಾಪುರ ಹೊರವಲಯದ ಬೈಕ್ ಮೇಲೆ ಹೊರಟಾಗ ಅಡ್ಡಗಟ್ಟಿದ ಇಬ್ಬರು ಅಪರಿಚಿತ ಯುವಕರು, ಪ್ರಶಾಂತ ಅವರ ಕೈ– ಹೊಟ್ಟೆಗೆ ಚಾಕು ಇರಿದು ಪರಾರಿಯಾದರು. ಘಟನೆ ಕಾರಣ ಗೊತ್ತಾಗಿಲ್ಲ. ಅಲ್ಲದೇ ಪ್ರಶಾಂತ ಅವರು ಚಾಕು ಇರಿದವರನ್ನು ಗುರುತಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಶಾಂತ ಅವರು ಐನಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.