Congress; ನಾಳೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ರವರಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ದಾವಣಗೆರೆ, ಆ. 29: ಕಾಂಗ್ರೆಸ್ (Congress) ಪಕ್ಷದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ (Gruha Lakshmi Scheme) ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ರವರು ಚಾಲನೆ ನೀಡುವರು.

Gunjan Krishna; ಗ್ಯಾರಂಟಿ ಯೋಜನೆಗಳ ದುರ್ಬಳಕೆಯಾಗದಂತೆ ಪರಿಶೀಲಿಸಿ ಅನುಮೋದಿಸಿ

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಡಾ. ಶಾಮನೂರು ಶಿವಶಂಕರಪ್ಪನವರು, ಡಿ.ಜಿ ಶಾಂತನಗೌಡ್ರು, ಶಿವಗಂಗಾ ಬಸವರಾಜ್, ಬಿ.ದೇವೇಂದ್ರಪ್ಪ, ಕೆ.ಎಸ್ ಬಸವಂತಪ್ಪ, ಶ್ರೀಮತಿ ಲತಾ ಮಲ್ಲಿಕಾರ್ಜುನ್, ಕೆ. ಅಬ್ದುಲ್ ಜಬ್ಬರ್, ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪ, ಮಹಾಪೌರರಾದ ವಿನಾಯಕ್ ಪೈಲ್ವಾನ್ ಭಾಗವಹಿಸುವರು.

ಪಕ್ಷದ ಜನಪ್ರಿಯ ಯೋಜನೆಯ ಈ ಕಾರ್ಯಕ್ರಮಕ್ಕೆ ಪಕ್ಷದ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಬ್ಲಾಕ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಪಕ್ಷದ ವಾರ್ಡ್ ಮತ್ತು ಪಂಚಾಯತ್ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!