ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷರಾಗಿ ಕೆ.ಎಲ್.ಹರೀಶ್ ಬಸಾಪುರ.

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಕೆ.ಎಲ್.ಹರೀಶ್ ಬಸಾಪುರ ಇವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ಆದೇಶದ ಮೇರೆಗೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಅಧ್ಯಕ್ಷ ಬಿ.ಆರ್.ನಾಯ್ಡು ನೇಮಕ ಮಾಡಿದ್ದಾರೆ.
ಕೆ.ಎಲ್.ಹರೀಶ್ ಈ ಹಿಂದೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ, ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ, ರಾಜ್ಯ ಸಮಿತಿಯ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ದಾವಣಗೆರೆ ಜಿಲ್ಲೆ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ನೇಮಿಸಲು ಮಾಜಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ರವರು, ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ನವರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ರಾದ ಎಚ್.ಬಿ ಮಂಜಪ್ಪನವರು ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದ್ದರು.