ಬಿಜೆಪಿಯ ಸರ್ವಾಧಿಕಾರದ ಧೋರಣೆಯಿಂದ ಸಂವಿಧಾನ ಬದಲಾವಣೆಯ ಒಳಸಂಚು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮಾರ್ಚ್ 11: ಬಿಜೆಪಿಯವರಿಗೆ ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ ಬದಲಾವಣೆ ಮಾಡುವ ಒಳಸಂಚನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂಸದ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾವಣೆಯ ಬಗ್ಗೆ ಪುನ: ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಈ ಮುಂಚೆ ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಸಂವಿಧಾನದ ಬಗ್ಗೆ ಅನಗತ್ಯವಾಗಿ ಮಾತಾನಾಡಿದ್ದಾರೆ. ಸಂವಿಧಾನದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತರಬೇಕಾದರೆ ಸರ್ಕಾರಕ್ಕೆ ಮೂರಕ್ಕೆ ಎರಡರಷ್ಟು ಬಹುಮತವಿರಬೇಕು. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಅವರಿಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ. ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಒಳಸಂಚು. ಆದ್ದರಿಂದ ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ ನರೇಂದ್ರ ಮೋದಿಯವರು ತಮ್ಮ ಈ ಯೋಚನೆಯನ್ನು ಅನಂತಕುಮಾರ್ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದರು.

ಸಂವಿಧಾನ ಬದಲಾವಣೆ ಇಂಗಿತ- ವೈಯಕ್ತಿಕ ಹೇಳಿಕೆ ಅಲ್ಲ

ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಂತ್ರಿಮಂಡಲದಲ್ಲಿದ್ದಂತಹವರು ಹಾಗೂ ಹಾಲಿ ಸಂಸದರಾಗಿರುವ ಹಿರಿಯ ನಾಯಕರಾದ ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕವಾಗುತ್ತದೆಯೇ? ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದೇ ಸುವಮನುಸ್ಮೃತಿಯ ತತ್ವಗಳನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಆದರೆ ನಮ್ಮ ಸಂವಿಧಾನ ಸಮಸಮಾಜ ನಿರ್ಮಾಣದ ತತ್ವವನ್ನು ಹೊಂದಿದ್ದು, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸ್ಕ್ರೀನಿಂಗ್ ಸಮಿತಿಯ ಸಭೆ ನಡೆಯುತ್ತಿದ್ದು, ಶಿಫಾರಸ್ಸುಗಳನ್ನು ಮಾಡಲಾಗುವುದು. ಇದರ ಬಗ್ಗೆ ತೀರ್ಮಾನವನ್ನು ರಾಷ್ಟ್ರೀಯ ಚುನಾವಣಾ ಸಮಿತಿಯು ಕೈಗೊಳ್ಳುತ್ತದೆ ಎಂದರು.

ಅನ್ನಭಾಗ್ಯ ಜಾರಿಗೆ ತರುವ ಆಹಾರ ಇಲಾಖೆಗೆ ಸ್ವಂತ ಕಟ್ಟಡ

ಆಹಾರ ಇಲಾಖೆಯ ಸ್ವಂತ ಕಟ್ಟಡ ನಿರ್ಮಿಸಿ, ಒಂದೇ ಸೂರಿನಡಿ ಇಲಾಖೆಯ ಎಲ್ಲ ಕಾರ್ಯಚಟುವಟಿಕೆಗಳು ನಡೆಸುವಂತೆ ಅನುಕೂಲವಗಲು ಇಂದು ಆಹಾರಸೌಧ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ. ಆಹಾರ ಇಲಾಖೆಯಿಂದಲೇ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ಪ್ರಮುಖ ಇಲಾಖೆಗಳಲ್ಲೊಂದಾಗಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *

error: Content is protected !!