ಮತ್ತೆ ಬಂತಾ ಕೊರೊನಾ? ಒಂದೇ ದಿನ 618 ಪ್ರಕರಣ, ಐದು ಸಾವು

ಮತ್ತೆ ಬಂತಾ ಕೊರೊನಾ? ಒಂದೇ ದಿನ 618 ಪ್ರಕರಣ, ಐದು ಸಾವು

ನವದೆಹಲಿ: ದೇಶದಲ್ಲಿ 117 ದಿನಗಳ ಬಳಿಕ ಒಂದೇ ದಿನ ಕೋವಿಡ್–19 ದೃಢಪಟ್ಟ 618 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ.

ಕಳೆದ 24 ಗಂಟೆಗಳಲ್ಲಿ 618 ಹೊಸ ಪ್ರಕರಣಗಳು ವರದಿಯಾಗಿದ್ದು ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,197ಕ್ಕೆ ಏರಿಕೆಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಕರ್ನಾಟಕ, ಮಹಾರಾಷ್ಟ್ರದಲ್ಲಿ ತಲಾ ಇಬ್ಬರು, ಉತ್ತರಾಖಂಡ್‌ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4,46,91,956ಕ್ಕೆ ತಲುಪಿದೆ. ಇಲ್ಲಿಯವರೆಗೂ ಕೋವಿಡ್‌ನಿಂದ ಮೃತಪಟ್ಟಿರುವವರ ಸಂಖ್ಯೆ 5,30,789ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 98.80 ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ. ಇದುವರೆಗೆ 220.64 ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!