ಜಿಲ್ಲೆಯಲ್ಲಿ ಕರೋನಾ ಏರಿಕೆ: ಡಾ. ರಾಘವನ್

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಏರಿಕೆ ಕಂಡುಬಂದಿದ್ದು, ಕಳೆದ ವಾರ ೦.೧೬ ಇದ್ದ ಪ್ರಮಾಣ ಸದ್ಯ ಶೇ. ೦.೪೭ ಕ್ಕೆ ಬಂದಿದೆ. ಜಿಲ್ಲೆಯಲ್ಲಿ ೭೭ ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ೩೩ ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಉಳಿದವರು ರೋಗ ಲಕ್ಷಣ ಇಲ್ಲದ ಕಾರಣ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಈವರೆಗೆ ವಿದೇಶಗಳಿಂದ ಜಿಲ್ಲೆಗೆ ೧೯೬ ಜನ ಬಂದಿದ್ದು, ಅಪಾಯದಂಚಿನ ದೇಶಗಳಿಂದ ಒಟ್ಟು ೭೭ ಜನ ಆಗಮಿಸಿದ್ದಾರೆ. ಎಲ್ಲ ೭೭ ಜನರ ವರದಿ ನೆಗೆಟಿವ್ ಬಂದಿದೆ. ೫೭ ಜನ ಕ್ವಾರಂಟೈನ್ ಅವಧಿ ಮುಗಿಸಿದ್ದು, ೨೦ ಜನ ಇನ್ನೂ ಕ್ವಾರಂಟೈನ್‌ನಲ್ಲಿದ್ದಾರೆ. ಕಳೆದ ಎರಡೂವರೆ ತಿಂಗಳಿನಿಂದ ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಾವು ಸಂಭವಿಸಿಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ತಿಳಿಸಿದ್ದಾರೆ.