12 ಜನರಿಗೆ ದಾವಣಗೆರೆಯಲ್ಲಿ ಕೊರೊನಾ ಸೊಂಕು: ಮೂವರು ಕೊವಿಡ್ ನಿಂದ ಗುಣಮುಖ
ದಾವಣಗೆರೆ: ಜಿಲ್ಲೆಯಲ್ಲಿ ಶನಿವಾರ 12 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ದಾವಣಗೆರೆ ತಾಲ್ಲೂಕಿನಲ್ಲಿ 8, ಜಗಳೂರು 2, ಹರಿಹರ ಮತ್ತು ಚನ್ನಗಿರಿಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಇಲ್ಲಿಯವರೆಗೂ 51,077 ಜನರಿಗೆ ಸೋಂಕು ದೃಢಪಟ್ಟಿದ್ದು, 50,421 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 608 ಜನರು ಬಲಿಯಾಗಿದ್ದಾರೆ.