ಪೌರಕಾರ್ಮಿಕರಿಗೆ ನಿರ್ಮಾಣಗೊಂಡಿರುವ ಮನೆಗಳ ಕಾಮಗಾರಿಯನ್ನು ವೀಕ್ಷಿಸಿದ ಮೇಯರ್
ದಾವಣಗೆರೆ:ದಾವಣಗೆರೆ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರದ ಗೃಹ ಭಾಗ್ಯ ಯೋಜನೆಯಡಿಯಲ್ಲಿ ನಿರ್ಮಾಣಗೊಂಡಿರುವ ವಸತಿ ಗೃಹಗಳ ಕಾಮಗಾರಿಯನ್ನು ಮಹಾಪೌರ ಎಸ್ ಟಿ.ವೀರೇಶ್ ಕಾಮಗಾರಿಯನ್ನು ವೀಕ್ಷಿಸಿ ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ವಸತಿಗೃಹಗಳ ಹಸ್ತಾಂತರ ಆಗಬೇಕು ಆ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು
ಈ ಸಂದರ್ಭದಲ್ಲಿ ನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ್ ಮುದಜ್ಜಿ,ವಾರ್ಡನ ಪಾಲಿಕೆ ಸದಸ್ಯರಾದ ಜಿ.ಡಿ.ಪ್ರಕಾಶ್,ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಎಲ್.ಡಿ.ಗೋಣೇಪ್ಪ, ಪಾಲಿಕೆ ಸದಸ್ಯರಾದ ಆರ್ ಎಲ್ ಶಿವಪ್ರಕಾಶ್, ಮಾಜಿ.ಸದಸ್ಯ ಶಿವನಗೌಡ ಟಿ.ಪಾಟೀಲ, ಪಾಲಿಕೆ ಅಧಿಕಾರಿಗಳಾದ ಉದಯಕುಮಾರ್, ಸಂದೀಪ್, ವಿನಾಯಕ್,ಇತರೆ ಅಧಿಕಾರಿಗಳು ಉಪಸ್ಥಿತಿರದ್ದರು