ರಾಜ್ಯ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ

ಬೆಂಗಳೂರು: ಏಪ್ರಿಲ್ 21ರ ಶುಕ್ರವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದೆ.

ಫಲಿತಾಂಶ ಘೋಷಣೆ ಸಂಬಂಧ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು,  11 ಗಂಟೆ ನಂತರ https://karresults.nic.in ಜಾಲತಾಣದಲ್ಲಿ ಫಲಿತಾಂಶ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2022–23ನೇ ಶೈಕ್ಷಣಿಕ ಸಾಲಿನಲ್ಲಿ 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೇ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಂಡು ಮೌಲ್ಯಮಾಪನ ಕಾರ್ಯವನ್ನು ಮಂಡಳಿ ಸುಸೂತ್ರವಾಗಿ ಪೂರ್ಣಗೊಳಿಸಿದೆ.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!