ಕೋವಿಡ್ ನಿಯಂತ್ರಣಕ್ಕಾಗಿ ಆಗಸ್ಟ್ 16ರವರೆಗೆ ರಾತ್ರಿ ಕರ್ಫ್ಯೂ ಜಾರಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಕೋವಿಡ್ ಸಾಂಕ್ರಾಮಿಕ ಸೋಂಕು ನಿಯಂತ್ರಣಕ್ಕಾಗಿ ಮತ್ತು ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜನಜಂಗುಳಿ ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಪತ್ತು ನಿರ್ವಹಣಾ ಕಾಯ್ದೆ ಯನ್ವಯ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾತ್ರಿ ಕಫ್ರ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
2021 ರ ಜುಲೈ 3 ಹಾಗೂ 18 ರಂದು ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ವಯ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಜಾರಿಗೊಳಿಸಲಾಗಿದ್ದು, ಈ ಅವಧಿಯಲ್ಲಿ ಅನುಮತಿಸಿದ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ಆದೇಶವು ಆ. 16 ರವರೆಗೆ ಅನ್ವಯವಾಗಲಿದೆ.
ಸರ್ಕಾರದ ಜುಲೈ 31 ರ ಆದೇಶ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ಸಂಪರ್ಕ ಆದೇಶಗಳು ಹಾಗೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳ ವಿಶೇಷ ಕಣ್ಗಾವಲು ಕ್ರಮಗಳಿಗೆ ಸಂಬಂಧಿಸಿದಂತೆ ಆದೇಶಗಳು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಹಾಗೂ ಜಿಲ್ಲೆಯ ಮುಜರಾಯಿ ಹಾಗೂ ಎಲ್ಲಾ ದೇವಾಲಯಗಳಲ್ಲಿ ಕೋವಿಡ್ ನಿಯಮವಾಳಿ ಅನುಸಾರ ದರ್ಶನಕ್ಕೆ ಮಾತ್ರ ಅವಕಾಶವಿದ್ದು ತೀರ್ಥ ಹಾಗೂ ಪ್ರಸಾದ ವ್ಯವಸ್ಥೆ ರದ್ದುಗೊಳಿಸಲಗಿದೆ ಹಾಗೂ ವಾರದ ಕೊನೆದಿನಗಳದ ಶನಿವಾರ ಹಾಗೂ ಭಾನುವಾರ ಆಗಸ್ಟ್ 31ರ ವರೆಗೆ ದೇವಸ್ಥಾನ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ