ಕೊವಿಡ್ ಸೀಲ್ಡೌನ್ ಗ್ರಾಮಗಳಿಗೆ ಬೇಟಿ: ಹರಿಹರ ಠಾಣಾ ವ್ಯಾಪ್ತಿಯ ಮರಳು ರೌಡಿ ಶೀಟರ್ ಆಸಾಮಿಗಳಿಗೆ ವಾರ್ನಿಂಗ್ ನೀಡಿದ ರಿಷ್ಯಂತ್
ದಾವಣಗೆರೆ: ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಸಿ. ಬಿ. ರಿಷ್ಯಂತ್, ಐಪಿಎಸ್ ರವರಿಂದು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮಹಾಂತೇಶ್ ಬೀಳಗಿ ಮತ್ತು ಶ್ರೀ ವಿಜಯ ಮಹಾಂತೇಶ್ ದಾನಮ್ಮನವರ್ , ಸಿಇಒ ದಾವಣಗೆರೆ ಹಾಗೂ ಇತರೆ ಅಧಿಕಾರಿಗಳೊಂದಿಗೆ ನಗರದಲ್ಲಿನ ಸಿ.ಜಿ.ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ 19 ಚಿಕಿತ್ಸಾ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು.
ನಂತರ ದಾವಣಗೆರೆ ಗ್ರಾಮಾಂತರ ಉಪವಿಭಾಗದ ವ್ಯಾಪ್ತಿಯಲ್ಲಿ ಕೋವಿಡ್ ಸೀಲ್ಡೌನ್ ಮಾಡಲಾದ ಗ್ರಾಮಗಳಾದ ಕೈದಾಳೆ, ಕುರ್ಕಿ, ಕುಕ್ಕುವಾಡ ಗ್ರಾಮಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು ಹಾಗೂ ಜನರಿಗೆ ಕೋವಿಡ್ ಸುರಕ್ಷಾ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದರು. ಗ್ರಾಮದ ಜನತೆಗೆ ಲಸಿಕೆ ನೀಡುವ ಕಾರ್ಯ ಚುರುಕುಗೊಳಿಸುವಂತೆ ಡಿಹೆಚ್ಓ ರವರಿಗೆ ಸೂಚನೆ ನೀಡಿದರು. ಕೋವಿಡ್ ನಿಂದ ಮೃತ ಪಟ್ಟ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ನಂತರ ಹರಿಹರ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಕ್ರಮ ಮರಳುಗಾರಿಕೆ ಮಾಡುವಂತ ರೌಡಿ ಶೀಟರ್ ಗಳಿಗೆ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಬೇಕೆಂದು ಸೂಚನೆ ನೀಡಿದರು ಹಾಗೂ ಅಕ್ರಮ ಚಟುವಟಿಕೆಗಳು ಕಂಡು ಬಂದರೆ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಹರಿಹರ ನಗರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕುಂದು ಕೊರತೆಗಳ ಬಗ್ಗೆ ವಿಚಾರಿಸಿ, ಕರ್ತವ್ಯಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು. ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ರವರಾದ ಶ್ರೀ ನರಸಿಂಹ ವಿ.ತಾಮ್ರದ್ವಜ, ಸಿಪಿಐ ರವರಾದ ಶ್ರೀ ಸತೀಶ್ ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು& ಸಿಬ್ಬಂದಿಗಳು ಉಪಸ್ಥಿತರಿದ್ದರು.