Fire: ಗೋದಾಮಿನಲ್ಲಿ ಅಗ್ನಿ ಅವಘಡ: ಇಬ್ಬರು ಸಜೀವ ದಹನ

IMG-20210923-WA0032

ಬೆಂಗಳೂರು: ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನಗೊಂಡ ಮನಕಲಕುವ ಘಟನೆ ನಗರ್ತರ್ ಪೇಟೆಯಲ್ಲಿ ನಡೆದಿದೆ.

ಬೆಂಗಳೂರಿನ ಶ್ರೀ ಪತ್ರಕಾಳಿ ಅಮ್ಮನ್ ಲಾರಿ ಸರ್ವೀಸ್ ಹೆಸರಿನ ಪಂಚರ್ ಶಾಪ್ ನಲ್ಲಿ ಈ ಘಟನೆ ಸಂಭವಿಸಿದ್ದು, ಅಂಗಡಿಯ ಫಯಾಜ್ ಹಾಗೂ ಮನೋಹರ್ ಸಾವು ಕಂಡಿದ್ದಾರೆ.ಓರ್ವನ ಸ್ಥಿತಿ ಗಂಭೀರವಾಗಿದೆ.

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವುದರಿಂದ ಈ ಅಗ್ನಿ ಅವಘಡ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ವಿವಿ ಪುರಂ ಪೊಲೀಸರು, ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!