ಜಿಲ್ಲಾ ಬಿತ್ತನೆ ಬೀಜ, ಕ್ರಿಮಿನಾಶಕ ಹಾಗೂ ರಸಗೊಬ್ಬರ ಮಾರಾಟಗಾರರ ಸಂಘದಿಂದ ಕ್ರಿಕೆಟ್ ಟೂರ್ನಿ
ದಾವಣಗೆರೆ: ದಾವಣಗೆರೆ ಜಿಲ್ಲಾ ಬಿತ್ತನೆ ಬೀಜ, ಕ್ರಿಮಿನಾಶ, ಮತ್ತು ರಸಗೊಬ್ಬರ ಮಾರಾಟಗಾರರ ಸಂಘದಿಂದ ಇದೇ ಪ್ರಥಮ ಬಾರಿಗೆ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಹೆಚ್. ನಾಗರಾಜ್ ಲೋಕಿಕೆರೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮಾ.19ರ ಭಾನುವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುವುದು. ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ 12 ತಂಡಗಳು ಭಾಗವಹಿಸಲಿದ್ದು, ಪ್ರಥಮ ಬಹುಮಾನ 15 ಸಾವಿರ ರೂ., ದ್ವಿತೀಯ 10 ಸಾವಿರ ಹಾಗೂ ತೃತೀಯ 5 ಸಾವಿರ ರೂ.ಗಳು ಹಾಗೂ ಪಾರಿತೋಷಕ ವಿತರಿಸಲಾಗುವುದು. ಸಮಾರೋಪ ಸಮಾರಂಭ ಅದೇ ದಿನ ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸ ಮೂರ್ತಿ, ಪ್ರಮೋದ್, ಕಿರಣ್ ಬಾಳೆಹೊಲದ, ಕೃಷ್ಣಮೂರ್ತಿ, ಶಿವು, ಶಿವಣ್ಣ, ಪ್ರತೀಕ್ ಇತರರು ಉಪಸ್ಥಿತರಿದ್ದರು.