ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಂ ಆಫಿಸರ್) ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸರ್ಕಾರ

ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಂ ಆಫಿಸರ್) ಮತ್ತು ಸ್ಥಳೀಯ ಹಾಗೂ ಮಿಕ್ಕುಳಿದ ವೃಂದದ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು 206‌ ಹುದ್ದೆಗಳಿಗೆ ನೇಮಕಾತಿ‌ ನಡೆಯಲಿದ್ದು, ಅರ್ಜಿ ಸಲ್ಲಿಸಲು ಡಿ.17 ರಿಂದ ಆರಂಭವಾಗಿ ಮುಂದಿನ ಜನವರಿ 15 ರ ಸಂಜೆ 6 ಗಂಟೆಗೆ ಶುಲ್ಕ ಪಾವತಿಸಲು ಕೊನೆಯ ದಿನ ನಿಗದಿಪಡಿಸಲಾಗಿದೆ. ಸಾಮಾನ್ಯ‌ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 500 ರು., ಮತ್ತು ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಿಗೆ 250 ರು., ಶುಲ್ಕಕ್ಕೆ ನಿಗದಿ ಪಡಿಸಲಾಗಿದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗೆ 35, ಹಿಂದುಳಿದ ವರ್ಗ 38 ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಕ್ಕೆ ವಯೋಮಿತಿ ನಿಗದಿಗೊಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ https://recruitment.ksp.gov.in ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!