ಕಚ್ಚಾತೈಲ ಬೆಲೆ ಸಾರ್ವಕಾಲಿಕ ಹೆಚ್ಚಳ : ದೇಶದಲ್ಲಿ ಇಂಧನ ದರವೆಷ್ಟು?

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್ಗೆ 120 ಯುಎಸ್ ಡಾಲರ್ ಗಡಿ ದಾಟಿದೆ. ಈ ನಡುವೆ ಭಾರತದ ಸರ್ಕಾರಿ ತೈಲ ಕಂಪನಿಗಳಿAದು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಕಳೆದ ನವೆಂಬರ್ 4ರಿಂದ ಇಂಧನ ದರ ಸ್ಥಿರವಾಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್ಗೆ 127.1 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ 3.89 ಡಾಲರ್ ಏರಿಕೆಯಾಗಿದೆ. ಆದರೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ.
ಪರಿಣಾಮವಾಗಿ, ಭೌಗೋಳಿಕ ರಾಜಕೀಯ ಬಿಕ್ಕಟ್ಟು ನೇತೃತ್ವದ ಕಚ್ಚಾ ತೈಲ ಬೆಲೆಯಲ್ಲಿ ಜಾಗತಿಕ ಏರಿಕೆಯು ಭಾರತದ ದೇಶೀಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್ಗೆ 15-22 ರೂ.ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ರಷ್ಯಾ ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಉತ್ಪಾದಕವಾಗಿದೆ. ರಷ್ಯಾದ ವಿರುದ್ಧದ ನಿರ್ಬಂಧಗಳು ಜಾಗತಿಕ ಪೂರೈಕೆಗಳನ್ನು ಮೊಟಕುಗೊಳಿಸುತ್ತದೆ ಮತ್ತು ಬೆಳವಣಿಗೆಯನ್ನು ನಿಗ್ರಹಿಸುತ್ತದೆ ಎಂದು ಭಯಪಡಲಾಗಿದೆ. ಗುರ್ಗಾಂವ್ನಲ್ಲಿ ಲೀಟರ್ ಪೆಟ್ರೋಲ್ ದರ 95.59 ರೂಪಾಯಿ, ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 95.73 ರೂಪಾಯಿ, ಭುವನೇಶ್ವರದಲ್ಲಿ ಲೀಟರ್ ಪೆಟ್ರೋಲ್ ದರ 101.81 ರೂಪಾಯಿ, ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 107.06 ರೂಪಾಯಿ ಇದೆ. ಚೆನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂ. ರಾಷ್ಟç ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.
ರಾಜಸ್ಥಾನದ ಶ್ರೀಗಂಗಾ ನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರAನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ : ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟಾçದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ.