ಡಿ.ಇಎಲ್.ಇಡಿ. ಕೋರ್ಸ್ ದಾಖಲಾತಿಗೆ ಅರ್ಜಿ ಆಹ್ವಾನ.
ದಾವಣಗೆರೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ವತಿಯಿಂದ 2022-23 ನೇ ಸಾಲಿನ ಡಿ.ಇಎಲ್.ಇಡಿ. ಕೋರ್ಸಿಗೆ ದಾಖಲಾತಿ ಪಡೆಯಲು ಆಫ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿಗಳನ್ನು ಸಲ್ಲಿಸಲು ಜು.31 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ, ಹಾಗೂ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವವರೂ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ನಮೂನೆಗಳನ್ನು www.schooleducation.kar.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿದ ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್), ದಾವಣಗೆರೆ ಇಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಧಾನ, ಶುಲ್ಕದ ಮಾಹಿತಿ, ಅರ್ಹತೆ, ಮೀಸಲಾತಿ ವಿವರಗಳು ಮತ್ತು ಇತರೆ ಮಾಹಿತಿಗಳನ್ನು www.schooleducation.kar.nic.in ನಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 8884881816, 9844401092, 08192-231156 ಸಂಪರ್ಕಿಸಬಹುದಾಗಿದೆ ಎಂದು ಡಯಟ್ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.