ಡಿ ರೂಪಾ, ರೋಹಿಣಿ ಸಿಂಧೂರಿ ಟ್ರಾಸ್ ಫರ್

ಡಿ ರೂಪಾ, ರೋಹಿಣಿ ಸಿಂಧೂರಿ ಟಾನ್ರ್‌ಫರ್

ಬೆಂಗಳೂರು: ಸಾಮಾಜಿಕ ಜಾಲ ತಾಣಗಳಲ್ಲಿ ಜಗಳವಾಡಿ ಸರ್ಕಾರಕ್ಕೆ ಮುಜುಗರ ತಂದಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರುಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಇವರಿಬ್ಬರ ನಡುವಣ ಸಂಘರ್ಷ ತಾರಕ್ಕೇರಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಇಬ್ಬರಿಗೂ ಯಾವುದೇ ಹುದ್ದೆಯನ್ನು ತೋರಿಸಿಲ್ಲ.
ಡಿ.ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮುನೀಶ್‌ ಮೌದ್ಗಿಲ್‌ ಅವರನ್ನು ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಅಧಿಕಾರಿಗಳ ಬೀದಿಜಗಳದಿಂದ ಮುಜುಗರಕ್ಕೆ ಒಳಗಾಗಿರುವ ಸರ್ಕಾರ, ಶಿಸ್ತು ಉಲ್ಲಂಘನೆ, ದುರ್ನಡತೆ, ಸರ್ಕಾರದ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿಗೆ ಸೂಚಿಸಿದೆ. ಇಬ್ಬರಿಗೂ ನೋಟಿಸ್‌ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!