ಧರ್ಮಸ್ಥಳದ ಮಂಜುನಾಥ ಸ್ವಾಮಿಯಲ್ಲಿ ಪುನೀತ್ ಆತ್ಮಕ್ಕೆ ಚಿರಶಾಂತಿ ಕೋರಿದ ಡಿ. ವೀರೇಂದ್ರ ಹೆಗ್ಗಡೆ

FB_IMG_1635516463338

ಧರ್ಮಸ್ಥಳ: ಧರ್ಮಸ್ಥಳದ ಧರ್ಮದರ್ಶಿ ಡಾ. ವೀರೇಂದ್ರ ಹೆಗ್ಗಡೆ ಯವರು ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದು.

2018 ರ ಸೆಪ್ಟೆಂಬರ್ 30 ರಂದು ಧರ್ಮಸ್ಥಳದಲ್ಲಿ ನಡೆದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಪುನೀತ್ ರಾಜ್ ಕುಮಾರ್ ಭಾಗವಹಿಸಿದ್ದರು . ಖ್ಯಾತ ಚಲನಚಿತ್ರನಟ ಪುನೀತ್‌ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು .

ಅವರ ನೇರ ನಡೆ – ನುಡಿ , ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ . ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತು ಗೌರವಕ್ಕೆ ಪಾತ್ರರಾಗಿದ್ದರು . ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ . ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ . ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು.

ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಪ್ರಾರ್ಥಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ , ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ – ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!