ಬೆಂಗಳೂರು: ಕಾಂತಾರ ಖ್ಯಾತಿಯ ನ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ದೊರೆತಿದೆ.
ರಿಷಬ್ ಶೆಟ್ಟಿ ಅವರು ‘ಅತ್ಯಂತ ಭರವಸೆಯ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿ ಸಿಕ್ಕಿರುವುದಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಶೆಟ್ಟಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಹಲವು ವಿಭಾಗಗಳಲ್ಲಿ ‘ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ನೀಡಲಾಗುತ್ತಿದೆ. ಫೆಬ್ರುವರಿ 20ರಂದು ಮುಂಬೈನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವರದಿಯಾಗಿದೆ.
ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಿಷಬ್ ನಿರ್ದೇಶನ ಮತ್ತು ನಟನೆಯನ್ನು ಪರ ಭಾಷಾ ನಟ–ನಟಿಯರು ಮೆಚ್ಚಿಕೊಂಡಿದ್ದರು.
