ಕಲಬುರ್ಗಿಯಲ್ಲಿ ವಿಪ್ರ ಅಡುಗೆದಾರರ ರಾಜ್ಯಮಟ್ಟದ ಪ್ರಥಮ ಸಮಾವೇಶ
ದಾವಣಗೆರೆ: ಅಖಿಲ ಕರ್ನಾಟಕ ವಿಪ್ರ ಅಡುಗೆದಾರರ ರಾಜ್ಯ ಮಟ್ಟದ ಪ್ರಥಮ ಸಮಾವೇಶವನ್ನು ಇದೇ ಫೆಬ್ರವೆರಿ 26 ಹಾಗೂ 27 ರಂದು ಕಲಬುರ್ಗಿಯ ಹಳೇ ಕೊಠಾರಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಗುರುರಾಜ್ ಬಳ್ಳಾರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ವಿಪ್ರ ಅಡುಗೆದಾರರು ಹಾಗೂ ಅಡುಗೆ ಸಹಾಯಕರು ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಡುಗೆ ಮಾಡುವವರು ಮತ್ತು ಬಿಂಬಿಸುವಲ್ಲಿ ಸಂಘ ಕಲಬುರ್ಗಿ ಇವರ ಸಹಭಾಗಿತ್ವದಲ್ಲಿ ಪ್ರಥಮ ರಾಜ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಫೆ.26ರ ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷ ಅನಿಲ್ ಅಷ್ಟಗಿ ನೆರವೇರಿಸುವರು. ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ರಂಗನಾಥ್ ದೇಸಾಯಿ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಾರಾಯಣ ರಾವ್ ಡಿ.ಕುಲಕರ್ಣಿ, ರಾಘವೇಂದ್ರ ಜೋಶಿ ನಾಗಣಸೂರ, ಸುಧಾಕರ ಪಾಟೀಲ್ ಯಂಕಂಚಿ, ಚಂದ್ರಕಾಂತ್ ಎಸ್.ಬಂಗರಗಿಕರ, ಚಂದ್ರಕಾಂತ ಅಕ್ಷಂತಿ ಆಗಮಿಸಲಿದ್ದು, ಹೆಚ್.ಕೆ.ವೆಂಕಟೇಶ್ ಬಳ್ಳಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ 4 ರಿಂದ ಎಲ್ಲಾ ಜಿಲ್ಲೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮೆರವಣಿಗೆಗೆ ಶ್ರೀ ಶರಣ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಫೆ.27ರ ಬೆಳಿಗ್ಗೆ 7.30 ಕುಕ್ಕೆ ದೇವಿಗೆ ಕುಂಕುಮಾರ್ಚನೆ, 9 ಗಂಟೆಗೆ ಶ್ರೀ ಅನ್ನಪೂರ್ಣೇಶ್ವರಿ ಶ್ರೀ ಸೂಕ್ತ ಹೋಮ ನೆರವೇರಲಿದೆ.
9.30ಕ್ಕೆ ಕಾರ್ಯಕ್ರಮದ ವೇದಿಕೆಯನ್ನು ಗುರುರಾಜ ಬಳ್ಳಾರಿ ಉದ್ಘಾಟಿಸಲಿದ್ದು, ಅನಿಲ್ ಅಷ್ಟಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ಎಲ್ಲಾ ಜಿಲ್ಲೆಯ ಹಾಗೂ ತಾಲ್ಲೂಕು ಅಧ್ಯಕ್ಷರುಗಳಿಗೆ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಬೆಳಿಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ನೆರವೇರಿಸಲಿದ್ದು, ಗುರುರಾಜ್ ಬಳ್ಳಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವರಾದ ಶಿವರಾಮ ಹೆಬ್ಬಾರ್, ಮುರುಗೇಶ್ ನಿರಾಣಿ, ಸಂಸದ ಉಮೇಶ್ ಜಾಧವ್,ಶಾಸಕ ದತ್ತಾತ್ರೇಯ ಸಿ.ಪಾಟೀಲ್ ರೇವೂರ, ಬ್ರಾಹ್ಮದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಎಸ್.ಸಚ್ಚಿದಾನಂದ ಮೂರ್ತಿ ಹಾಗೂ ಮಾಜಿ ವಿದಾನ ಪರಿಷತ್ ಸದಸ್ಯ ಆಲ್ಲಮ ಪ್ರಭು ಪಾಟೀಲ ಸೇರಿದಂತೆ ಇನ್ನಿತರ ಗಣ್ಯರು ಆಗಮಿಸುವರು ಎಂದು ಮಾಹಿತಿ ನೀಡಿದರು.