ರಾಜ್ಯ ಸುದ್ದಿ

dalit community; ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ದಾವಣಗೆರೆ, ಆ.18: ಕೆಲವರು ನಮ್ಮ ದಲಿತ ಸಮುದಾಯದವರೇ (dalit community) ತಮ್ಮ ವೈಯಕ್ತಿಕ ಹಾಗೂ ರಾಜಕೀಯ ಲಾಭಕ್ಕಾಗಿ, ಮಾಧ್ಯಮದಲ್ಲಿ ಹೆಸರು ಮಾಡಲು ಕ್ಷುಲ್ಲಕ ಕಾರಣಗಳಿಗೆ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಳಕೆ ಮಾಡುತ್ತಾ ಸುಳ್ಳು ಕೇಸ್ ದಾಖಲಿಸಿ ಸಮಾಜದಲ್ಲಿ ದಲಿತ ಸಮುದಾಯವನ್ನು ತಲೆತಗ್ಗಿಸುವಂತೆ ಮಾಡುತ್ತಿದ್ದಾರೆ ಎಂದು ದಲಿತ ಯುವಶಕ್ತಿ ವೇದಿಕೆಯ ಕಾರ್ಯಕರ್ತ ಚೇತನ್ ಕನ್ನಡಿಗ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ಮಾಧ್ಯಮದಲ್ಲಿ ನಟ ಉಪೇಂದ್ರ ಹಾಗೂ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ವಿರುದ್ಧ ರಾಜ್ಯದಲ್ಲಿ ಹಲವೆಡೆ ಕೇಸ್ ದಾಖಲು ಮಾಡಲಾಗಿದೆ ಮತ್ತು ಇದು ದಿನದಿಂದ ದಿನಕ್ಕೆ ರಾಜಕೀಯ ತಿರುವು ಪಡೆಯುತ್ತಿದೆ. ಇವರಿಬ್ಬರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಾ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮವಾಗಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷ ಮಂಜುನಾಥ್, ಹೇಮಂತ್, ಜೆ.ವೆಂಕಟೇಶ್ ನಾಯ್ಕ ರಾಹುಲ್, ನಾಗರಾಜ್ ಸುರ್ವೆ, ಪವನ್ ರೇವಣಕರ್, ರವಿಕುಮಾರ್, ಪ್ರಕಾಶ್ ಇದ್ದರು.

Click to comment

Leave a Reply

Your email address will not be published. Required fields are marked *

Most Popular

To Top