ರಸ್ತೆ ಅಪಘಾತದಲ್ಲಿ ಡಿಎಆರ್ ಪೊಲೀಸ್ ಸಿಬ್ಬಂದಿ ಸಾವು

ದಾವಣಗೆರೆ– ಹೊನ್ನಾಳಿ ಬಳಿ ಇಂದು ನಡೆದ ರಸ್ತೆ ಅಪಘಾತದಲ್ಲಿ ದಾವಣಗೆರೆ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹೆಚ್.ಸಿದ್ದೇಶ್ ಮೃತಪಟ್ಟಿದ್ದಾರೆ.
ಕುಟುಂಬ ಸದಸ್ಯರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರೊಂದಿಗೆ ಮಣಿಪಾಲ್ ಗೆ ಕಾರಿನಲ್ಲಿ ತೆರಳುತ್ತಿದ್ದಾಗ ಬೆಳಗಿನ ಜಾವ 5 ಗಂಟೆ ವೇಳೆಗೆ ಕಾರು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಅಪಘಾತದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಸಿದ್ದೇಶ್ ಮೃತಪಟ್ಟಿದ್ದಾರೆ. ಸಿದ್ದಶ್ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. 2012ನೇ ಬ್ಯಾಚ್ ನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು. ಅವರಿಗೆ ಅವಳಿ-ಜವಳಿ ಮಕ್ಕಳಿದ್ದರು ಎನ್ನಲಾಗಿದೆ.